ವೀರಶೈವ ಲಿಂಗಾಯತರಿಗೆ ಓಬಿಸಿ ಮೀಸಲಾತಿ, ಸದ್ಯಕ್ಕಿಲ್ಲ ಶಿಫಾರಸು - ಸಂಪುಟ ಸಭೆ ನಿರ್ಧಾರ

ಬೆಂಗಳೂರು: ವೀರಶೈವ ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಕಳುಹಿಸುವ ತೀರ್ಮಾನದಿಂದ ಸಚಿವ ಸದ್ಯಕ್ಕೆ ಹಿಂದಡಿ ಇಟ್ಟಿದೆ. ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಈ ವಿಚಾರ ತಿಳಿಸಿದ್ದಾರೆ. 1994ರಲ್ಲಿಯೇ ವೀರಶೈವ ಲಿಂಗಾಯತರನ್ನು ಓಬಿಸಿಗೆ ಸೇರಿಸಬೇಕು ಎಂದು ಬೇಡಿಕೆ ಇಡಲಾಗಿತ್ತು. ಇದರ ಜೊತೆಗೆ ಇನ್ನು ಕೆಲವು ಸಮುದಾಯಗಳನ್ನು ಒಳಗೊಂಡು ಸಮಗ್ರ ಅಧ್ಯಯನ ನಡೆಸಿ, ಕೇಂದ್ರಕ್ಕೆ ಶಿಫಾರಸು ಸಲ್ಲಿಸಲು ನಿರ್ಧಾರಿಸಲಾಗಿದೆ ಎಂದು ತಿಳಿಸಿದರು. ಈ ಮೀಸಲಾತಿಗೂ ರಾಜ್ಯ ಸರಕಾರಕ್ಕೂ ಸಂಬಂಧ ಇಲ್ಲ. ಕೇಂದ್ರ ಸರಕಾರದ ಕೋಟಾದಡಿಯಲ್ಲಿ ನೀಡಿ ಎಂಬುದು ವೀರಶೈವ - ಲಿಂಗಾಯತರ ಬೇಡಿಕೆ. ಇದಕ್ಕಾಗಿ 1999 ರಿಂದ ವೀರಶೈವ ಮಹಾಸಭಾ ಕೇಂದ್ರ ಸರಕಾರದೊಂದಿಗೆ ಹೋರಾಟ ಮಾಡುತ್ತಾ ಬಂದಿದೆ. ಈ ಸಂಬಂಧ ಮಹಾಸಭಾ ತನ್ನ ಪ್ರಯತ್ನ ಮುಂದುವರಿಸಬೇಕು ಎಂದು ಹೇಳಿದರು. ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಸಲ್ಲಿಸಲಾಗಿದೆ. ಇದರ ಹಿಂದೆ ಯಾರ ಮೇಲೆಯೂ ಒತ್ತಡ ಹೇರುವ ಉದ್ದೇಶ ಇಲ್ಲ. ಇತರ ಸಮುದಾಯವನ್ನೂ ಸೇರಿಸಿ, ವಿವರವಾಗಿ ಮಾಹಿತಿ ಕಲೆ ಹಾಕಿ, ಅಧ್ಯಯನ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ಓಬಿಸಿ ಕೋಟಾಕ್ಕೆ ಸೇರಿಸುವಂತೆ ಶಿಫಾರಸು ಮಾಡುವ ನಿರ್ಧಾರದಿಂದ ಹಿಂದೆ ಸರಿಯಲಾಗಿದೆ ಎಂದು ತಿಳಿಸಿದರು.


from India & World News in Kannada | VK Polls https://ift.tt/37gH3C1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...