ಬೆಂಗಳೂರು: ಆರ್‌ಆರ್ ನಗರದ ಉಪಚುನಾವಣೆಗೆ ಮತದಾನ ಆರಂಭವಾಗಿದೆ. ಮುಂಜಾನೆಯಿಂದಲೇ ಜನರು ಮತಗಟ್ಟೆಗಳಿಗೆ ಬಂದು ಸಂವಿಧಾನದ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಆರ್ ಆರ್ ನಗರದಲ್ಲಿ 4 ಲಕ್ಷದ 62 ಸಾವಿರ ಮಂದಿ ಮತದಾರರಿದ್ದಾರೆ. ಇದೀಗ ಆರ್‌ಆರ್ ನಗರ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ. ಜ್ಞಾನ ಭಾರತಿ ವಾರ್ಡ್‌ನಲ್ಲಿರುವ ಎಚ್ ಎಂ ಆರ್ ಶಾಲೆಯಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ವಿ.ಕೃಷ್ಣಮೂರ್ತಿ, ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಕ್ಷೇತ್ರಕ್ಕೆ ಹೊಸ ವ್ಯಕ್ತಿ ಬೇಕು ಎಂಬ ಆಶಯ ಇದೆ. ಹೀಗಾಗಿ ಪ್ರಾದೇಶಿಕ ಪಕ್ಷಕ್ಕೆ ಜನರು ಆಶೀರ್ವಾದ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ ರಾಷ್ಟ್ರೀಯ ಪಕ್ಷಗಳ ಕಿತ್ತಾಟದಿಂ ಜನರು ಬೇಸತ್ತಿದ್ದಾರೆ. ನಮ್ಮ ಪಕ್ಷ ಉತ್ತಮವಾಗಿದೆ ಎಂದು ತಿಳಿಸಿದರು.
from India & World News in Kannada | VK Polls https://ift.tt/2TNf7z9