ತೆಂಗು ಬೆಳೆಗಾರರಿಗೆ ಗುಡ್‌ನ್ಯೂಸ್:‌ ತೆಂಗು ಬೆಳೆ ಉದ್ಯಮಕ್ಕೆ ಸಿಗುತ್ತೆ 10 ಲಕ್ಷ ರೂ. ಸಾಲ..! ಇಲ್ಲಿದೆ ವಿವರ

ತುಮಕೂರು: ಕೃಷಿ ಇಲಾಖೆಯು ಹೊಸ ಯೋಜನೆ ಪ್ರಾರಂಭಿಸುವ ತೆಂಗು ಬೆಳೆ ಅವಲಂಬಿತ ಕಿರು ಉದ್ದಿಮೆ, ರೈತ ಉತ್ಪಾದಕರ ಸಂಸ್ಥೆ (ಎಫ್‌ಪಿಒ), ಸ್ವ-ಸಹಾಯ ಗುಂಪು (ಎಸ್‌ಎಚ್‌ಜಿ) ಹಾಗೂ ಉತ್ಪಾದಕರ ಸಹಕಾರಿಗಳಿಗೆ ಶೇ.3.5ರಷ್ಟು ಬಡ್ಡಿ ದರದಲ್ಲಿ10 ಲಕ್ಷ ರೂ. ಸಾಲವನ್ನು ಒದಗಿಸಲು ಅರ್ಜಿ ಆಹ್ವಾನಿಸಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನ ತಿಳಿಸಿದ್ದಾರೆ. ಆಹಾರ ಸಂಸ್ಕರಣೆಯ ಅಸಂಘಟಿತ ಅತಿ ಸಣ್ಣ ಉದ್ಯಮ ಕ್ಷೇತ್ರದ ಕೊಡುಗೆ ಹಾಗೂ ಅವುಗಳ ಕಾರ್ಯಕ್ಷಮತೆಗೆ ತೊಡಕಾಗುತ್ತಿರುವ ಸವಾಲುಗಳನ್ನು ಗಣನೆಗೆ ತೆಗೆದುಕೊಂಡು ಆಹಾರ ಸಂಸ್ಕರಣ ಕೈಗಾರಿಕೆಗಳ ಮಂತ್ರಾಲಯವು (ಎಂಒಎಫ್‌ಪಿಐ) ಪೂರಕ ಬೆಂಬಲ ಹಾಗೂ ಸೇವೆಗಳ ಪ್ಯಾಕೇಜ್‌ ಮೂಲಕ ಜಾರಿಗೆ ತಂದಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್‌ಎಂಇ) ಯೋಜನೆಯಡಿ ಈ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ಆಸಕ್ತ ಉದ್ದಿಮೆ, ಸಂಸ್ಥೆಗಳು ಯೋಜನೆಯ ವಿಸ್ತೃತ ವರದಿ ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾಮಟ್ಟದ ಸಮಿತಿಗೆ ಸಲ್ಲಿಸಬೇಕು ಮತ್ತು ಕೇಂದ್ರ ಸರಕಾರದ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಬೇಕು. ಜಿಲ್ಲೆಯಲ್ಲಿ ತೆಂಗು ಬೆಳೆ ಅವಲಂಬಿತ ಸಂಸ್ಕರಣಾ ಉದ್ದಿಮೆಯನ್ನು ಕೈಗೊಳ್ಳಲಿಚ್ಛಿಸುವವರು ಮಾಹಿತಿಗೆ ಕೇಂದ್ರ ಸರಕಾರದ ಆಹಾರ ಸಂಸ್ಕರಣ ಕೈಗಾರಿಕೆಗಳ ಮಂತ್ರಾಲಯದ ಜಾಲತಾಣ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ನೋಡಲ್‌ ಅಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.


from India & World News in Kannada | VK Polls https://ift.tt/34Dh5YU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...