ಬ್ರಿಟನ್‌ನಿಂದ ರಾಜ್ಯಕ್ಕೆ ಬಂದ 30 ಮಂದಿಗೆ ಕೊರೊನಾ: 7 ಜನರಲ್ಲಿ ರೂಪಾಂತರಿ ಸೋಂಕು: ಸುಧಾಕರ್

ಬೆಂಗಳೂರು: ಬ್ರಿಟನ್‌ನಿಂದ ರಾಜ್ಯಕ್ಕೆ ಬಂದಿರುವ ಒಟ್ಟು 30 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ಡಾ. ಕೆ. ಮಾಹಿತಿ ನೀಡಿದ್ದಾರೆ. ಇನ್ನು ಬ್ರಿಟನ್‌ನಿಂದ ಬಂದವರ ಸಂಪರ್ಕದಲ್ಲಿದ್ದ ನಾಲ್ವರಿಗೂ ಕೋವಿಡ್ ಪಾಸಿಟಿವ್ ಆಗಿದೆ ಎಂದು ತಿಳಿದುಬಂದಿದೆ. 34 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಯಾರಿಗೂ ಯಾವುದೇ ಸಮಸ್ಯೆಯಾಗಿಲ್ಲ, ಆದ್ರೆ, ಎಲ್ಲರ ಮೇಲೂ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ ನೀಡಿದ್ಧಾರೆ. ಇನ್ನು ರಾಜ್ಯದಲ್ಲಿ ಈವರೆಗೆ ಕೇವಲ ಏಳು ಜನರಲ್ಲಿ ಮಾತ್ರ ಕೋವಿಡ್ ರೂಪಾಂತರಿ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ ಸಚಿವ ಸುಧಾಕರ್, ಬ್ರಿಟನ್‌ನಿಂದ ಬಂದವರ ಪೈಕಿ ಇನ್ನೂ 80 ಜನರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದರು. ಹೀಗಾಗಿ, ಅವರೆಲ್ಲರ ಪತ್ತೆ ಕಾರ್ಯ ಚುರುಕುಗೊಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ನೈಟ್ ಕರ್ಫೂ ಬಗ್ಗೆ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದ ಸುಧಾಕರ್, ನೈಟ್ ಕರ್ಫೂ ಜಾರಿಗೆ ತಂದರೆ ಚೆನ್ನಾಗಿರುತ್ತದೆ ಎಂದಷ್ಟೇ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿ ನಿರ್ಧಾರ ಮಾಡಿತ್ತು. ಅದರ ಪ್ರಕಾರವೇ ನೈಟ್ ಕರ್ಫೂ ಜಾರಿಗೆ ತರಲಾಗಿತ್ತು. ಆದ್ರೆ, ಕೆಲವರ ಒತ್ತಾಯದ ಹಿನ್ನೆಲೆಯಲ್ಲಿ ವಾಪಸ್ ತೆಗೆದುಕೊಳ್ಳಲಾಗಿದೆ ಎಂದ ಸುಧಾಕರ್, ಇದರ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದರು. ಇನ್ನು ರೂಪಾಂತರಿ ಕೊರೊನಾ ಪತ್ತೆಯಾದವರ ಮನೆಗಳನ್ನು ಮಾತ್ರ ಸೀಲ್ ಡೌನ್ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ ಸುಧಾಕರ್, ಈ ಹಿಂದೆ ಕೋವಿಡ್ ಆರಂಭದ ದಿನಗಳಲ್ಲಿ ಕೈಗೊಂಡ ಮಾದರಿಯಲ್ಲಿ ಸೀಲ್ ಡೌನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.


from India & World News in Kannada | VK Polls https://ift.tt/3pA0ixO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...