ಚಿಕ್ಕಮಗಳೂರು: ಡಿಸೆಂಬರ್ ತಿಂಗಳಲ್ಲಿ ನಡೆಯುವ ಚುನಾವಣೆ ಬಹಿಷ್ಕರಿಸಲು ಮಲೆನಾಡಿಗರು ಮುಂದಾಗಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ. ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು ಈ ಬಗ್ಗೆ ಬ್ಯಾನರ್ ಹಾಕಿದ್ದಾರೆ. ಆನ್‌ಲೈನ್ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ಸರ್ವಜನಿಕರು ಸೂಚಿಸಿದ್ದಾರೆ. ಕಡವಂತಿ, ಹುಯಿಗೆರೆ, ದೇವದಾನ, ಬಿದರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬ್ಯಾನರ್ ಹಾಕಲಾಗಿದೆ. ಜನರು ಸಮಸ್ಯೆಯಲ್ಲಿದ್ದರು ಸರಕಾರ ತಿರುಗಿ ನೋಡಿತ್ತಿಲ್ಲ ಎನ್ನುವ ಕಾರಣಕ್ಕೆ ಚುನಾವಣೆ ಬಹಿಷ್ಕರಿಸಿ ತಕ್ಕ ಪಾಠ ಕಲಿಸಲು ಇದೀಗ ಸಾರ್ವಜನಿಕರು ಮುಂದಾಗಿದ್ದಾರೆ. ಹುಲಿ ಯೋಜನೆ, ಬಫರ್ ಝೋನ್, ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದ ತೂಗುಗತ್ತಿ ತೂಗುತ್ತಿ ಮಲೆನಾಡಿನ ಜನರ ಮೇಲಿದೆ. ಸರ್ಕಾರದ ಈ ಯೋಜನೆಗಳಿಂದ ಜಿಲ್ಲೆಯ ಮಲೆನಾಡು ಭಾಗದ ನೂರಾರು ಗ್ರಾಮಗಳೇ ಕಣ್ಮರೆಯಾಗಲಿವೆ. ಈ ಕಾರಣಕ್ಕೆ ಮಲೆನಾಡಿಗರು ಚುನಾವಣಾ ಬಹಿಷ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ.
from India & World News in Kannada | VK Polls https://ift.tt/2KUWTdP