ನಾನು ಹೋದ್ಮೇಲೂ ಜೆಡಿಎಸ್‌ ಉಳಿಯುತ್ತೆ, ಅದಕ್ಕಾಗಿ ನನ್ನ ಹೋರಾಟ: ಮಾಜಿ ಪ್ರಧಾನಿ ಎಚ್‌ಡಿಡಿ ಸ್ಪಷ್ಟನೆ

ಬೆಂಗಳೂರು: ನಾನು ಇರುವಷ್ಟು ದಿನ ಮಾತ್ರ ಅಲ್ಲ. ನಾನು ಹೋದ್ಮೇಲೂ ಪಕ್ಷ ಉಳಿಯಲಿದೆ. ಅದಕ್ಕಾಗಿ ನನ್ನ ಹೋರಾಟ ಇರಲಿದೆ. ನಮಗೆ ಉಮ್ಮಸ್ಸಿರುವ ಕಾರ್ಯಕರ್ತರು ಇನ್ನು ಇದ್ದಾರೆ. ಪಕ್ಷವನ್ನು ಮತ್ತೆ ಸದೃಢವಾಗಿ ಸಂಘಟಿಸುತ್ತೇವೆ ಎಂದು ಮಾಜಿ ಪ್ರಧಾನಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಮೂಲಕ ಬಿಜೆಪಿ ಜೊತೆ ಜೆಡಿಎಸ್‌ ವಿಲೀನದ ಬಗ್ಗೆ ನಡೆಯುತ್ತಿರುವ ಚರ್ಚೆಗೆ ತೆರೆ ಎಳೆಯುವ ಪ್ರಯತ್ನ ನಡೆಸಿದರು. ಬೆಂಗಳೂರಿನ ಜೆಪಿ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಸೋತ ಬಳಿಕ ನನಗೆ ತುಂಬಾ ನೋವಾಗಿದೆ. ನಮ್ಮಲ್ಲಿ ಉಮ್ಮಸ್ಸಿರೋ ಕಾರ್ಯಕರ್ತರು ಇನ್ನು ಇದ್ದಾರೆ. ಹಾಗಾಗಿ ಯಾರು ಕೆಲಸ ಮಾಡುತ್ತಾರೋ ಅವರಿಗೆ ಜವಾಬ್ದಾರಿ ನೀಡಬೇಕಿದೆ ಎಂದು ಹೇಳಿದರು. ನಾವು ಕರೆದುಕೊಂಡು ಬಂದು ಚುನಾವಣೆಗೆ ನಿಲ್ಲಿಸುವುದು. ಅವರು ಹೋಗುವುದು ಬೇಡ. ಜನವರಿ 7ರಂದು ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಇದೆ. ಆ ಸಭೆಯಲ್ಲಿ ಮಾಜಿ ಎಚ್‌ಡಿ ಕುಮಾರಸ್ವಾಮಿ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುತ್ತಾರೆ. ಸಂಕ್ರಾಂತಿ ಬಳಿಕ ಕುಮಾರಸ್ವಾಮಿ ಅವರೇ ತಮ್ಮದೇ ಐಡಿಯಾಗಳ ಮೂಲಕ ಪಕ್ಷ ಸಂಘಟನೆಯನ್ನು ಮುಂದುವರಿಸುತ್ತಾರೆ ಎಂದು ತಿಳಿಸಿದರು. ರಾಷ್ಟ್ರೀಯ ಪಕ್ಷಗಳಿಗೆ ಹೈಕಮಾಂಡ್ ಇದೆ. ಆದರೆ, ನಮಗೆ ಯಾವುದೇ ಹೈಕಮಾಂಡ್‌ ಇಲ್ಲ. ನಾನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಹೋಗಲು ಸಾಧ್ಯವಿಲ್ಲ, ವಯಸ್ಸಿಗೆ ತಕ್ಕಂತೆ ನನ್ನ ಕೆಲಸ ಮಾಡುತ್ತೇನೆ. ಜೆಡಿಎಸ್‌ ಮನೆಯನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಹೇಳಿದರು. ಜೆಡಿಎಸ್ ಮನೆ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಪ್ರಾದೇಶಿಕ ಪಕ್ಷವನ್ನು ಉಳಿಸಿಕೊಳ್ಳಲು ಎಷ್ಟು ಕಷ್ಟ ಎನ್ನುವುದು ಅದರ ಮುಖ್ಯಸ್ಥರಿಗೆ ಗೊತ್ತಿರುತ್ತದೆ. ಜೆಡಿಎಸ್‌ ಆಟಕ್ಕುಂಟು, ಲೆಕ್ಕಕ್ಕಿಲ್ಲ ಎಂದು ಹೇಳುತ್ತಾರೆ. ತೆನೆ ಹೊತ್ತ ಮಹಿಳೆಗೆ ಏನೆಲ್ಲಾ ಅವಮಾನ ಮಾಡುತ್ತಾ ಇದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್‌ ವಿರುದ್ಧ ಮಾಜಿ ಪ್ರಧಾನಿ ಆಕ್ರೋಶ ವ್ಯಕ್ತಪಡಿಸಿದರು.


from India & World News in Kannada | VK Polls https://ift.tt/3mRtwGw

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...