ಬೆಂಗಳೂರು: ರಾಜ್ಯಕ್ಕೆ ಶನಿವಾರ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದು ಏನು ಸುದ್ದಿ ತರುತ್ತಾರೆ ಎಂದು ಕಾದು ನೋಡೋಣ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಸಂಪುಟ ವಿಸ್ತರಣೆ ಆಗಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ರಾಜ್ಯ ಉಸ್ತುವಾರಿ ಆಗಿರುವ ಅರುಣ್ ಸಿಂಗ್ ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರು ಏನು ಸುದ್ದಿ ತರುತ್ತಾರೆ ಎಂಬುವುದನ್ನು ನೋಡೋಣ ಎಂದು ತಿಳಿಸಿದರು. ಸಂಪುಟ ವಿಸ್ತರಣೆಗೆ ಸಾಕಷ್ಟು ಪ್ರಯತ್ನವನ್ನು ಸಿಎಂ ಬಿಎಸ್ ಯಡಿಯೂರಪ್ಪ ನಡೆಸಿದ್ದರು. ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆದರೆ ಯಾವುದೇ ಪ್ರಗತಿ ಸಾಧಿಸಲು ಸಾಧ್ಯವಾಗಿರಲಿಲ್ಲ. ಇದೀಗ ಹೊಸ ವರ್ಷಕ್ಕೆ ಸಂಪುಟ ವಿಸ್ತರಣೆ ಮಾಡುವ ಪ್ರಯತ್ನದಲ್ಲಿ ಯಡಿಯೂರಪ್ಪ ಇದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಆಗಮಿಸುತ್ತಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆಗೆ ಮಾತುಕತೆಯನ್ನು ನಡೆಸುವ ಸಾಧ್ಯತೆ ಇದೆ. ಸಂಪುಟ ವಿಸ್ತರಣೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿಸಾಕಷ್ಟು ಜನರು ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ. ಆಕಾಂಕ್ಷಿಗಳ ಒತ್ತಡವನ್ನು ನಿಭಾಯಿಸುವುದು ಕೂಡಾ ಯಡಿಯೂರಪ್ಪ ಪಾಲಿಗೆ ಸವಾಲಿನ ಸಂಗತಿಯಾಗಿದೆ.
from India & World News in Kannada | VK Polls https://ift.tt/3n5qbUC