ವಿದೇಶದಿಂದ ಬರುವ ಎಲ್ಲರಿಗೂ ಕೋವಿಡ್‌ ಟೆಸ್ಟ್ ಕಡ್ಡಾಯ, ಸುಧಾಕರ್‌ ಸೂಚನೆ

ಬೆಂಗಳೂರು: ವಿದೇಶದಿಂದ ಬರುವ ಎಲ್ಲರಿಗೂ ಇನ್ಮುಂದೆ ಕೋವಿಡ್‌ ತಪಾಸಣೆ ಕಡ್ಡಾಯವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು ಕೋವಿಡ್‌ ರೂಪಾಂತರ ತಡೆಗಟ್ಟುವಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಬ್ರಿಟನ್‌ನಿಂದ ಬಂದ 14 ಮಂದಿಯಲ್ಲಿ ಕೋವಿಡ್‌ ಸೋಂಕು ಕಾಣಿಸಿಕೊಂಡಿದೆ. ಆದರೆ ಇವರಲ್ಲಿ ಹೊಸ ಪ್ರಭೇದದ ಸೋಂಕು ಇದೆಯಾ ಎಂಬ ವರದಿ ಸೋಮವಾರ ಸಿಗಲಿದೆ ಎಂದು ಮಾಹಿತಿ ನೀಡಿದರು. ಬ್ರಿಟನ್‌ನಿಂದ ಬಂದ ಇನ್ನು ಕೆಲವರು ಟ್ರೇಸ್ ಆಗಿಲ್ಲ. ಈ ನಿಟ್ಟಿನಲ್ಲಿ ಬಿಬಿಎಂಪಿ ಹಾಗೂ ಗೃಹ ಇಲಾಖೆಯಿಂದಲೂ ಹುಡುಕಾಟ ನಡೆಸಲಾಗುತ್ತಿದೆ. ಈ ವಿಚಾರದ ಕುರಿತಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು. ಮುಂಜಾಗರೂಕತಾ ಕ್ರಮವಾಗಿ ಇನ್ನು ಮುಂದಿನ ದಿನಗಳಲ್ಲಿ ವಿದೇಶದಿಂದ ಬರುವವರು ಎಲ್ಲರು ಕೋವಿಡ್ ವರದಿ ಕಡ್ಡಾಯವಾಗಿ ಎಂದು ತಿಳಿಸಿದ ಸುಧಾಕರ್‌ ಕೋವಿಡ್‌ ರೂಪಾಂತರದ ಹಿನ್ನೆಲೆಯಲ್ಲಿ ಯಾರು ಆತಂಕ ಪಡಬೇಕಾದ ಅಗತ್ಯ ಇಲ್ಲ. ಈ ವೈತರಾಣು ಗುಣ ಮ್ಯೂಟೆಡ್ ಆಗಿರುತ್ತದೆ ಎಂದು ಮಾಹಿತಿ ನೀಡಿದರು.


from India & World News in Kannada | VK Polls https://ift.tt/3hmTNeT

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...