ಬಂಟ್ವಾಳ: ಔಷಧ ಎಂದು ಕಳೆನಾಶಕ ಸೇವಿಸಿ ಗ್ರಾಪಂ ಅಭ್ಯರ್ಥಿ ಸಾವು, ಗೆಲುವಿನ ನಿರೀಕ್ಷೆಯಲ್ಲಿದ್ದರು ಜಯಂತ್‌!

ಬಂಟ್ವಾಳ: ಬಾಯಿ ಹುಣ್ಣಿಗೆ ಎಂದು ತೆಗೆದುಕೊಳ್ಳುತ್ತಿದ್ದ ಔಷಧಿ ಬದಲಾಗಿ ಖಾಲಿಯಾದ ಔಷಧ ಬಾಟಲಲ್ಲಿಟ್ಟಿದ್ದ ಕಳೆನಾಶಕವನ್ನು ಸೇವಿಸಿ ಗ್ರಾಪಂ ನಿಕಟಪೂರ್ವ ಸದಸ್ಯ ಹಾಗೂ ಹಾಲಿ ಅಭ್ಯರ್ಥಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಕಾವಳಮುಡೂರು ಗ್ರಾಮದಲ್ಲಿ ನಡೆದಿದೆ. ಕಾವಳಮುಡೂರು ಗ್ರಾಮದ, ಅರ್ಗತ್ಯಾರು ನಿವಾಸಿ ಜಯಂತ ಪ್ರಭು (58) ಮೃತಪಟ್ಟವರು. ಡಿ.21ರಂದು ರಾತ್ರಿ 11 ಗಂಟೆಯ ವೇಳೆ ತನ್ನ ಬಾಯಿ ಹುಣ್ಣಿಗೆಂದು ತೆಗೆದುಕೊಳ್ಳುತ್ತಿದ್ದ ಔಷಧದ ಬದಲಾಗಿ ಖಾಲಿಯಾಗಿದ್ದ ಔಷಧ ಬಾಟಲಿಯಲ್ಲಿ ಶೇಖರಿಸಿಟ್ಟಿದ್ದ ಟ್ರೆತ್ರೖಕಾಟ್‌ ಎಂಬ ಹುಲ್ಲಿಗೆ ಸಿಂಪಡಣೆ ಮಾಡುವ ಕಳೆನಾಶಕ ಔಷಧವನ್ನು ಸಿರಪ್‌ ಎಂದು ತಪ್ಪಾಗಿ ಭಾವಿಸಿ ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದರು. ಮರುದಿನ ಗ್ರಾ.ಪಂ. ಚುನಾವಣೆಯಲ್ಲಿ ಮತದಾನ ಮಾಡಿದ್ದರಲ್ಲದೆ ಮತಗಟ್ಟೆಯಲ್ಲೂ ಒಂದಷ್ಟು ಹೊತ್ತು ಕಳೆದು ಕೊನೆ ಕ್ಷಣದ ಮತದಾರನ ಮನವೊಲಿಸುವಲ್ಲಿಯೂ ತೊಡಗಿದ್ದರು. ಬಳಿಕ ರಾತ್ರಿ ವೇಳೆಗೆ ದಿಢೀರ್‌ ಅಸ್ವಸ್ಥರಾಗಿದ್ದರೆನ್ನಲಾಗಿದ್ದು ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮಧ್ಯಾಹ್ನದ ಹೊತ್ತಿಗೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಅವರ ಪುತ್ರ ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ,ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌,ಜಿ.ಪಂ. ಸದಸ್ಯ ಬಿ.ಪದ್ಮಶೇಖರ ಜೈನ್‌ ಅಂತಿಮ ನಮನ ಸಲ್ಲಿಸಿದರು.


from India & World News in Kannada | VK Polls https://ift.tt/38FMiM4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...