ಮಂಡ್ಯ: ನಗರದ ಮಹಾವೀರ ವೃತ್ತದಲ್ಲಿ ಗುರುವಾರ ರಾತ್ರಿ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮದ್ದೂರು ತಾಲೂಕು ಕದಲೂರು ನಿವಾಸಿ ಶಿವಲಿಂಗಯ್ಯ(60) ಮೃತ ವ್ಯಕ್ತಿ. ಕಟ್ಟಡ ನಿರ್ಮಾಣ ಕಾರ್ಮಿಕರಾದ ಇವರು ಗುರುವಾರ ಸಂಜೆ ಕೂಲಿ ಕೆಲಸ ಮುಗಿಸಿಕೊಂಡು ಮಹಾವೀರ್ ವೃತ್ತಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದು, ಟೆಂಪೊವನ್ನು ವಶಕ್ಕೆ ಪಡೆದಿರುವ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
from India & World News in Kannada | VK Polls https://ift.tt/3mFgcG7