: ನಗರದ ಬಿಜೈ ಮತ್ತು ಕೋರ್ಟ್ ಸಮೀಪ ಕೆಲದಿನಗಳ ಹಿಂದೆ ಕಂಡು ಬಂದ ಪ್ರಕರಣಕ್ಕೆ ಸಂಬಂಧಿಸಿ ಡಿ. 3 ರಂದು ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದ ವ್ಯಕ್ತಿ ತೀರ್ಥಹಳ್ಳಿ ಮೂಲದ ನಜೀರ್ ಮಹಮ್ಮದ್ ಆಗಾ ಎಂದು ತಿಳಿದು ಬಂದಿದ್ದು, ಈತ ನಗರದಲ್ಲಿ ಆನ್ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ. ಮೊಬೈಲ್ ದಾಖಲೆ ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ. ಈತನ ಜತೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸ್ ಶೋಧ ಮುಂದುವರಿದಿದೆ. ಕದ್ರಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
from India & World News in Kannada | VK Polls https://ift.tt/39BLlXp