ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಜೆಡಿಎಸ್‌ ಗಮನಾರ್ಹ ಸಾಧನೆ ಮಾಡಿದೆ; ಕುಮಾರಸ್ವಾಮಿ

ಬೆಂಗಳೂರು: ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಆಯ್ಕೆಯಾದ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಮಾಜಿ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ. ಪಕ್ಷ ಬೆಂಬಲಿಸಿದ, ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸೋತರೂ, ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸದಾ ಇರಲಿದೆ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದವರು ಪಕ್ಷದ ತಳಮಟ್ಟದ ಕಾರ್ಯಕರ್ತರು ಎಂದಿರುವ ಕುಮಾರಸ್ವಾಮಿ, ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ. ಪಕ್ಷ ತಳಮಟ್ಟದಲ್ಲಿಯೂ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ. ಇನ್ನು ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ. ಜೆಡಿಎಸ್‌ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ನಾನು ಹೇಳಲು ಇಚ್ಛಿಸುತ್ತೇನೆ ಎಂದು ಮಾಜಿ ಸಿಎಂ ಅಭಿಪ್ರಾಯಪಟ್ಟಿದ್ದಾರೆ.


from India & World News in Kannada | VK Polls https://ift.tt/2WXFhRl

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...