ವಾಜಪೇಯಿ ಜನ್ಮದಿನ: 'ಸದೈವ್ ಅಟಲ್' ಸ್ಮಾರಕಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ಹೊಸದಿಲ್ಲಿ: ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ, ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 96ನೇ ಜನ್ಮದಿನ ಅಂಗವಾಗಿ, ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ದೆಹಲಿಯ ವಿಜಯ್ ಘಾಟ್‌ನಲ್ಲಿರುವ '' ಸ್ಮಾರಕಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ, ಅಟಲ್ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ , ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಗಣ್ಯರು ಅಟಲ್ ಸ್ಮಾರಕಕ್ಕೆ ತಮ್ಮ ಗೌರವವನ್ನು ಸಲ್ಲಸಿದರು. ಇದಕ್ಕೂ ಮೊದಲು ಟ್ವೀಟ್ ಮೂಲಕ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಶುಭಾಶಯ ತಿಳಿಸಿದ್ದ ಪ್ರಧಾನಿ ಮೋದಿ, ಅವರ ನಾಯಕತ್ವದಲ್ಲಿ ದೇಶ ಅಭಿವೃದ್ಧಿಯ ಹೊಸ ಅವಕಾಶಗಳನ್ನು ಬಳಸಿಕೊಂಡು ವೇವಾಗಿ ಮುನ್ನುಗ್ಗತೊಡಗಿತು. ಸಶಕ್ತ ಹಾಗೂ ಸಮೃದ್ಧ ಭಾರತ ನಿರ್ಮಾಣ ಮಾಡುವ ಅವರ ಸಂಕಲ್ಪವನ್ನು ನಾವು ಈಡೇರಿಸೋಣ ಎಂದು ಹೇಳಿದ್ದರು. ಇನ್ನು ಅಟಲ್ ಜನ್ಮದಿನದ ಅಂಗವಾಗಿ ಮಾಜಿ ಪ್ರಧಾನಿ ಅವರನ್ನು ಸ್ಮರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೈದ್ಧಾಂತಿಕ ಬದ್ಧತೆಯುಳ್ಳ ರಾಜಕಾರಣಿ, ತಮ್ಮ ಸೌಮ್ಯ ಸ್ವಭಾವದಿಂದಲೇ ಎಲ್ಲರ ಗೌರವಕ್ಕೂ ಪಾತ್ರರಾಗಿದ್ದ ಅಟಲ್ ಅವರ ಜೀವನ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಹೀಗೆ ಅನೇಕ ಗಣ್ಯರು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸ್ಮರಿಸಿದ್ದು, ಅವರ ಆಡಳಿತದ ಕುರುಹುಗಳನ್ನು ಮೆಲುಕು ಹಾಕಿದ್ದಾರೆ.


from India & World News in Kannada | VK Polls https://ift.tt/2KRJd3t

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...