ಬಳ್ಳಾರಿಯ ಖ್ಯಾತ ವೈದ್ಯ ಬಿ.ಕೆ.ಶ್ರೀನಿವಾಸ ಮೂರ್ತಿ ಇನ್ನಿಲ್ಲ

ಬಳ್ಳಾರಿ: ನಗರದ ಖ್ಯಾತ ವೈದ್ಯ ಬಿ.ಕೆ.ಶ್ರೀನಿವಾಸ ಮೂರ್ತಿ(80) ಅವರು ಅನಾರೋಗ್ಯದಿಂದ ಡಿ, 3ರ ಗುರುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ನಗರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಗುರುವಾರ ಮೃತಪಟ್ಟಿದ್ದಾರೆ. ಇವರಿಗೆ ಡಾ.ಬಿ.ಕೆ.ಸುಂದರ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ನಗರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಡಾ.ಬಿ.ಕೆ.ಶ್ರೀನಿವಾಸ ಮೂರ್ತಿ ಅವರ ನಿವಾಸದಲ್ಲಿ ಪ್ರತಿ ವರ್ಷ ನಡೆಯುವ ವರಮಹಾಲಕ್ಷ್ಮಿ ಪೂಜೆಗೆ ಸುಷ್ಮಾ ಸ್ವರಾಜ್ ಅವರು ಆಗಮಿಸಿ, ಡಾ. ಬಿ.ಕೆ. ಶ್ರೀನಿವಾಸಮೂರ್ತಿ, ಸುಂದರ್ ಅವರ ಮನೆಯಲ್ಲಿ ಪೂಜೆ ಸಲ್ಲಿಸುತ್ತಿದ್ದರು. ಸತತ 12 ವರ್ಷಗಳ ಕಾಲ ಪೂಜೆಗೆ ಆಗಮಿಸಿದ್ದರು.


from India & World News in Kannada | VK Polls https://ift.tt/3mvdeDY

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...