ಜಮ್ಮು-ಕಾಶ್ಮೀರ ನಿವಾಸಿಗಳಿಗಾಗಿ ಆಯುಷ್ಮಾನ್‌ ಭಾರತ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ನಿವಾಸಿಗಳಿಗೆ ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯನ್ನು ಕೇಂದ್ರ ಸರಕಾರ ವಿಸ್ತರಿಸಿದ್ದು, ಪ್ರಧಾನಿ ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿದರು. 2011ರ ಜನಗಣತಿಯ ಆಧಾರದಲ್ಲಿ ಜಮ್ಮು-ಕಾಶ್ಮೀರದ 20.10 ಲಕ್ಷ ಅರ್ಹ ಫಲಾನುಭವಿಗಳಿಗೆ ಇದರಡಿ ಆರೋಗ್ಯ ವಿಮಾ ರಕ್ಷಣೆ, ಗುಣಮಟ್ಟದ ಹಾಗೂ ಕೈಗೆಟುಕುವ ಆರೋಗ್ಯ ಸೇವೆಗಳು ಸಿಗಲಿವೆ. ಪಿಎಂಜೆಎವೈ ಸೆಹೆತ್‌ ಯೋಜನೆಯಿಂದ ಇಲ್ಲಿನ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಮೌಲ್ಯದ ನಗದುರಹಿತ ಆರೋಗ್ಯ ಸೇವೆ ಸಿಗಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಕೂಡ ಉಪಸ್ಥಿತರಿದ್ದರು. ಕೇಂದ್ರ ಸರಕಾರವು, ಈಗಾಗಲೇ ಜಮ್ಮು-ಕಾಶ್ಮೀರದಲ್ಲಿ ಆರೋಗ್ಯ ವಿಮಾ ಯೋಜನೆಯಡಿ 34 ಖಾಸಗಿ ಆಸ್ಪತ್ರೆಗಳು ಸೇರಿ 219 ಆಸ್ಪತ್ರೆಗಳ ಜತೆ ಒಪ್ಪಂದ ಮಾಡಿಕೊಂಡಿದೆ. ಇಂತಹ ನಿರ್ದಿಷ್ಟ ಆಸ್ಪತ್ರೆಗಳಲ್ಲಿ ಚಿಕಿತ್ಸೆ, ಆರೈಕೆ, ಗುಣಮಟ್ಟದ ಆರೋಗ್ಯ ಸೇವೆಗಳ ಸಂಪೂರ್ಣ ನೆರವು ಸಿಗಲಿದೆ. ನೂತನ ಆರೋಗ್ಯ ಸೇವೆಯಿಂದ ಜನರನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳುವ ಅಪಾಯ ತಪ್ಪುತ್ತದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರ ಸರಕಾರವು 2018ರಲ್ಲಿ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಆರೋಗ್ಯ ವಿಮೆ ಒದಗಿಸುವ ಆಯುಷ್ಮಾನ್‌ ಭಾರತ್‌ ಯೋಜನೆಗೆ ಚಾಲನೆ ನೀಡಿತ್ತು. ಪಿಎಂಜೆಎವೈ ವಿಶ್ವದಲ್ಲೇ ಅತಿದೊಡ್ಡ ಆರೋಗ್ಯ ವಿಮಾನ ಯೋಜನೆಯಾಗಿದ್ದು, ಸರಕಾರವೇ ಇದರ ಹೊಣೆ ಹೊತ್ತಿದೆ. ದುಬಾರಿಯಾದ ಚಿಕಿತ್ಸಾ ವೆಚ್ಚದಿಂದ ಪ್ರತಿವರ್ಷ 6 ಕೋಟಿ ಭಾರತೀಯರನ್ನು ಬಡತನದ ರೇಖೆಗೆ ದೂಡುವುದನ್ನು ಈ ಯೋಜನೆ ತಪ್ಪಿಸಿದೆ.


from India & World News in Kannada | VK Polls https://ift.tt/3aHZnah

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...