ಕೋವಿಡ್ ರೂಪಾಂತರಿ: ರಾಜ್ಯದಲ್ಲಿ ಸೃಷ್ಟಿಯಾಗುತ್ತಿದೆ ಆತಂಕ, ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ರೂಪಾಂತರಿ ಸೋಂಕು ಹರಡುತ್ತಿದ್ದು ಜನರಲ್ಲೂ ಆತಂಕ ಸೃಷ್ಟಿಯಾಗಿದೆ. ಮಂಗಳವಾರ ಮೂವರಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಈ ಸಂಖ್ಯೆ ಏಳಕ್ಕೆ ದಾಟಿದೆ. ಇನ್ನು ಕೆಲವರ ತಪಾಸಣಾ ವರದಿ ಇನ್ನಷ್ಟೇ ಬರಬೇಕಿದೆ. ಬ್ರಿಟನ್‌ನಲ್ಲಿ ಕೋವಿಡ್ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಈ ಪೈಕಿ ಓರ್ವ ಮಹಿಳೆ, ಮಗು ಹಾಗೂ ಮತ್ತೋರ್ವ ವ್ಯಕ್ತಿಯಲ್ಲಿ ಕೋವಿಡ್‌ ರೂಪಾಂತರಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಮತ್ತೊಂದು ವರದಿಯೂ ಕೈಸೇರಿದ್ದು ಮತ್ತೆ ನಾಲ್ವರಲ್ಲಿ ಕೋವಿಡ್‌ ರೂಪಾಂತರಿ ಸೋಂಕು ಪತ್ತೆಯಾಗಿದೆ. ಇದೀಗ ಇವರ ಜೊತೆಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನು ಪತ್ತೆಹಚ್ಚುವ ಕೆಲಸವೂ ಆರಂಭಗೊಂಡಿದೆ. ಅಷ್ಟೇ ಅಲ್ಲದೆ ಬ್ರಿಟನ್‌ನಿಂದ ಇವರು ಆಗಮಿಸಿದ್ದ ವಿಮಾನದಲ್ಲಿ ಇದ್ದ ಸಹಪ್ರಯಾಣಿಕರ ಗುರುತು ಪತ್ತೆ ಹಚ್ಚಲಾಗಿದ್ದು ಅವರೆಲ್ಲವರನ್ನು ನಿಗಾಡಲ್ಲಿ ಇಡುವುದು ಹಾಗೂ ಅಗತ್ಯ ಬಿದ್ದರೆ ತಪಾಸಣೆಗೆ ಒಳಪಡಿಸುವುದನ್ನು ಮಾಡಲಾಗುತ್ತಿದೆ. ಇನ್ನು ಕೋವಿಡ್‌ ರೂಪಾಂತರಿ ಸೋಂಕು ಕಾಣಿಸಿಕೊಂಡಿರುವ ಮಹಿಳೆ ವಾಸವಾಗಿರುವ ಅಪಾರ್ಟ್ಮೆಂಟ್‌ನ್ನು ಸೀಲ್‌ಡೌನ್ ಮಾಡಲಾಗಿದೆ. ಎಲ್ಲಾ ನಿವಾಸಿಗಳನ್ನು ಆರ್‌ಟಿಪಿಸಿಆರ್‌ ತಪಾಸಣೆಗೆ ಒಳಪಡಿಸಲಾಗಿದೆ. ಆದರೆ ಎಲ್ಲರ ವರದಿಯೂ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ. ಅದರ ಜೊತೆಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಕಳುಹಿಸಲು ಸರ್ಕಾರ ಸೂಚನೆ ನೀಡಿದೆ. ಆದರೆ ಸಾಂಸ್ಥಿತ ಕ್ವಾರಂಟೈನ್‌ಗೆ ತೆರಳಲು ನಿವಾಸಿಗಳು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್‌ ಸೀಲ್‌ ಡೌನ್ ಮಾಡಲಾಗಿದೆ. ಹೆಚ್ಚಿನ ಮುಂಜಾಗರೂಕತಾ ಕ್ರಮ ಸದ್ಯ ಕೋವಿಡ್ ರೂಪಾಂತರಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಆದರೆ ಸೀಲ್‌ಡೌನ್‌ ಅಥವಾ ಲಾಕ್‌ಡೌನ್ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವರಾದ ಡಾ. ಕೆ ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಸೋಂಕು ಹರಡದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.


from India & World News in Kannada | VK Polls https://ift.tt/38E5ObG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...