ಕೊರೊನಾ ರೂಪಾಂತರ ಭೀತಿ; ಸಚಿವ ಸುಧಾಕರ್‌ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ

ಬೆಂಗಳೂರು: ಆತಂಕದ ಹಿನ್ನೆಲೆ ಆರೋಗ್ಯ ಸಚಿವ ‌ಡಾ. ಕೆ ಸುಧಾಕರ್ ನೇತೃತ್ವದಲ್ಲಿ ಸಭೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಿತು. ವಿಧಾನಸೌಧದ ಸುಧಾಕರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಸುದರ್ಶನ್, ಸದಸ್ಯರಾದ ರವಿ, ಗಿರಿಧರ್ ಬಾಬು ಸೇರಿ ಸದಸ್ಯರು ಭಾಗಿಯಾದರು. ಬ್ರಿಟನ್‌ನಲ್ಲಿ ಕಾಣಿಸಿಕೊಂಡ ಕೊರೊನಾ ರೂಪಾಂತರ ವಿಚಾರವಾಗಿ ರಾಜ್ಯದಲ್ಲಿ ತಲೆದೋರಿರುವ ಆತಂಕದ ಹಿನ್ನೆಲೆ ಶಾಲೆ ಆರಂಭ, ರಾತ್ರಿ ಕರ್ಫ್ಯೂ ಕುರಿತಾಗಿ ಸಭೆಯಲ್ಲಿ ಚರ್ಚೆ ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು. ಈ ಸಂಬಂಧ ಈಗಾಗಲೇ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿರ್ಧಾರಗಳು, ಜನವರಿ 1 ರಿಂದ ವಿದ್ಯಾಗಮ ಮೂಲಕ ಶಾಲೆ ಆರಂಭದ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರಗಳು ಸೇರಿದಂತೆ ಅನೇಕವಿಚಾರಗಳ ಕುರಿತು ಚರ್ಚೆ ನಡೆಸಿ ಸಚಿವ ಸುಧಾಕರ್‌ ಮಾಹಿತಿ ಪಡೆದುಕೊಂಡರು. ಸುಮಾರು 2 ಗಂಟೆಗಳ ಕಾಲ ನಡೆದ ಆರೋಗ್ಯ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿಲಾಗಿದ್ದು, ಆ ಪೈಕಿ ಶಾಲೆಗಳ ರೀಓಪನ್ ಬಗ್ಗೆ ಶಿಕ್ಷಣ ಇಲಾಖೆ ಮತ್ತೆ ವರದಿ ಕೇಳಿದ್ದ ಹಿನ್ನೆಲೆ ಶಾಲೆಗಳ ಪುನಾರಾರಂಭ ರೀಓಪನ್ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಜೊತೆಗೆ ಕೊರೊನಾ ರೂಪಾಂತರ ಕುರಿತು ಏನೆಲ್ಲ ಮುಂಜಾಗರೂಕತಾ ಕ್ರಮ ತೆಗೆದುಕೊಳ್ಳಬೇಕು, ವಿದೇಶದಿಂದ ಬರುತ್ತಿರುವವರಿಗೆ ಕಡ್ಡಾಯವಾಗಿ ಕ್ವಾರಂಟೈನ್ ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಚರ್ಚೆಯಾದ ವಿಷಯಗಳ ವರದಿಯನ್ನು ಆರೋಗ್ಯ ಸಚಿವ ಡಾ ಸುಧಾಕರ್‌ ಅವರಿಗೆ ಆರೋಗ್ಯ ತಾಂತ್ರಿಕ ಸಲಹಾ ಸಮಿತಿ ಸಲ್ಲಿಸಲಿದೆ.


from India & World News in Kannada | VK Polls https://ift.tt/3ayxIZq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...