ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್‌ ಭಾವಚಿತ್ರದ ಫ್ಲೆಕ್ಸ್‌ಗೆ ಕಿಡಿಗೇಡಿಗಳಿಂದ ಬೆಂಕಿ

ಶ್ರೀರಂಗಪಟ್ಟಣ: ತಾಲೂಕಿನ ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್‌ ಇರುವ ಫ್ಲೆಕ್ಸ್‌ಗೆ ಮಂಗಳವಾರ ತಡರಾತ್ರಿ ಕಿಡಿಗೇಡಿಗಳು ಹಚ್ಚಿರುವ ಘಟನೆ ನಡೆದಿದೆ. ಸುಟ್ಟ ನಂತರ ಸ್ಥಳದಲ್ಲಿ ಗ್ರಾ.ಪಂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳ ಬೆಂಬಲಿಗರು ಹಾಗೂ ಗ್ರಾಮದ ಮುಖಂಡರ ಹೆಸರನ್ನು ಚೀಟಿಯಲ್ಲಿ ಬರೆದು ಆ ಚೀಟಿಯ ಜೆರಾಕ್ಸ್‌ ಪ್ರತಿಯನ್ನು ಅಲ್ಲಿ ಬಿಸಾಡಿದ್ದಾರೆ. ಗ್ರಾ.ಪಂ.ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ದಲಿತರು ಹಾಗೂ ಸವರ್ಣೀಯರ ನಡುವೆ ದ್ವೇಷ ಬಿತ್ತುವ ಉದ್ದೇಶದಿಂದ ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅಂಬೇಡ್ಕರ್‌ ಭಾವಚಿತ್ರ ಇರುವ ಫ್ಲೆಕ್ಸ್‌ ಬೆಂಕಿ ಹಾಕಿರುವ ಘಟನೆಯನ್ನು ಗ್ರಾಮದ ದಲಿತ ಸಮುದಾಯ ಖಂಡಿಸಿದೆ. ಈ ಸಂಬಂಧ ಆರೋಪಿಗಳನ್ನು ಪತ್ತೆ ಮಾಡಬೇಕು. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀರಂಗಟ್ಟಣ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಪಿಎಸ್‌ಐ ಗಿರೀಶ್‌ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಆರೋಪಿಗಳ ಪತ್ತೆಗೆ ಶೋಧ ಕಾರ‍್ಯ ನಡೆಸುತ್ತಿದ್ದಾರೆ.


from India & World News in Kannada | VK Polls https://ift.tt/3mJZxAn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...