ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ಹವಾ ನಿಯಂತ್ರಿತ ಕೊಠಡಿಯಲ್ಲಿ ಕುಳಿತು ಕೆಲವರು ಪ್ರಜಾಪ್ರಭುತ್ವದ ಪಾಠ ಮಾಡಲು ಮುಂದಾಗಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಟಿ ಬೀಸಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್‌ಗೆ ಚಾಟಿ ಬೀಸಿದ್ದಾರೆ. ಜಮ್ಮು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಸಮಿತಿ ಚುನಾವಣೆಯನ್ನು ಆಯೋಜಿಸುವ ಮೂಲಕ ಕಣಿವೆ ರಾಜ್ಯದಲ್ಲಿ ಹೊಸ ಅಧ್ಯಾಯವನ್ನು ಬರೆಯಲಾಗಿದೆ. ಪಾರದರ್ಶಕ ಚುನಾವಣೆ ಪ್ರಕ್ರಿಯೆ, ಯುವ ಮತದಾರರು ಉತ್ಸಾಹದಿಂದ ಭಾಗವಹಿಸಿದ್ದಾರೆ. ಇದು ದೇಶದ ಪ್ರಜಾಪ್ರಭುತ್ವದಲ್ಲಿ ಹೆಮ್ಮೆಯ ವಿಷಯ ಎಂದು ಮೋದಿ ಹೇಳಿದರು. ದಿಲ್ಲಿಯಲ್ಲಿ ಕುಳಿತಿರುವ ಕೆಲವರು ದಿನವೂ ಪ್ರಜಾಪ್ರಭುತ್ವದ ಪಾಠ ಹೇಳಿಕೊಡುತ್ತಲೇ ಇರುತ್ತಾರೆ. ಎದುರಾಳಿಗಳನ್ನು ಸದಾ ಟೀಕಿಸುತ್ತಲೇ ಇರುತ್ತಾರೆ. ಆದರೆ ಸುಪ್ರೀಂ ಕೋರ್ಟ್ ಆದೇಶವನ್ನೇ ಪಾಲನೆ ಮಾಡುವುದಿಲ್ಲ ಎಂದು ಟೀಕಿಸಿದರು. ಸುಪ್ರೀಂ ಕೋರ್ಟ್ ಆದೇಶವಿದ್ದರೂ ಆಡಳಿತ ಇರುವ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಪಂಚಾಯಿತಿ ಹಾಗೂ ಪುರಸಭೆ ಚುನಾವಣೆ ನಡೆಸಿಲ್ಲ. ಆದರೆ ನಾವು ಕಾಶ್ಮೀರದಲ್ಲಿ ಚುನಾವಣೆ ಆಯೋಜಿಸಿದೆವು. ಆದರೆ ಕಾಂಗ್ರೆಸ್ ನಮಗೆ ಪ್ರಜಾಪ್ರಭುತ್ವದ ಪಾಠ ಒಪ್ಪಿಸುತ್ತಿದೆ ಎಂದು ಮೋದಿ ಛೇಡಿಸಿದರು. ಕಣಿವೆ ರಾಜ್ಯ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಆದ ನಂತರ ಇದೇ ಮೊದಲ ಬಾರಿಗೆ ಮೂರು ಹಂತದಲ್ಲಿ ಚುನಾವಣೆ ನಡೆದಿದೆ. ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ಬಗ್ಗೆ ಸ್ವಲ್ಪ ಅರಿವಿಲ್ಲದೇ ಪ್ರತಿಪಕ್ಷಗಳು ವಿರೋಧ ಮಾಡಬೇಕೆಂದು ಮುಂದಾಗಿವೆ. ಅಲ್ಲದೇ ಅನ್ನದಾತರನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಮೋದಿ ದೂರಿದರು. ದಶಕಗಳ ಕಾಲ ಅಧಿಕಾರದಲ್ಲಿದ್ದವರು ದಿಲ್ಲಿಯಲ್ಲಿ ಕುಳಿತಿದ್ದರೆ ಹೊರತು ಕಣಿವೆ ರಾಜ್ಯ, ಈಶಾನ್ಯ ರಾಜ್ಯಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದರು. ಆದರೆ ಬಿಜೆಪಿ ಎಲ್ಲ ಪ್ರದೇಶಗಳ ಅಭಿವೃದ್ಧಿಗೆ, ಬದಲಾವಣೆಗೆ ಒತ್ತು ನೀಡಿದೆ ಎಂದು ಮೋದಿ ತಿಳಿಸಿದರು.
from India & World News in Kannada | VK Polls https://ift.tt/3nWIHzS