ಶಾಕಿಂಗ್‌ ನ್ಯೂಸ್‌..! ವಿಧಾನ ಪರಿಷತ್‌ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!

: ವಿಧಾನಪರಿಷತ್‌ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ(65) ಅವರು ರೈಲಿಗೆ ತಲೆಕೊಟ್ಟು ಮಾಡಿಕೊಂಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ. ಎಸ್‌ಎಲ್‌ ಧರ್ಮೇಗೌಡ ಅವರು ಸೋಮವಾರ ಸಂಜೆ ಮನೆಯಿಂದ ತಮ್ಮ ಕಾರ್‌ನಲ್ಲಿ ಒಬ್ಬರೇ ತೆರಳಿದ್ದರು. ರಾತ್ರಿಯಾದರೂ ಮನೆಗೆ ವಾಪಸ್‌ ಬಾರದ ಕಾರಣ ಗನ್‌ಮ್ಯಾನ್‌, ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಅನೇಕ ಕಡೆಗಳಲ್ಲಿ ಹುಡುಕಾಡಿದ ನಂತರ ಕೊನೆಗೆ ಅವರ ಮೃತದೇಹ ಕಡೂರು ತಾಲೂಕಿನ ಗುಣಸಾಗರದ ಮಂಕೇನಹಳ್ಳಿ ಬಳಿ ದೇಹ ಪತ್ತೆಯಾಗಿದೆ. ತಮ್ಮ ಹಳೇ ಸ್ಯಾಂಟ್ರೋ ಕಾರಿನಲ್ಲಿ ಒಬ್ಬರೇ ತೆರಳಿದ್ದ ಧರ್ಮೇಗೌಡ ಅವರು ರಾತ್ರಿ ಸುಮಾರು 11-12 ಗಂಟೆ ಅವಧಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಅವರ ತಲೆ ದೇಹದಿಂದ ಛಿದ್ರಗೊಂಡಿದೆ. ದೇಹ ಸಿಕ್ಕ ಸ್ವಲ್ಪ ದೂರದಲ್ಲಿ ಅವರ ತಲೆ ಪತ್ತೆಯಾಗಿದೆ. ಸದ್ಯ ಸ್ಥಳಕ್ಕೆ ಸ್ಥಳಕ್ಕೆ ಶಾಸಕ ಸಿ.ಟಿ.ರವಿ, ಸೋದರ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮತ್ತಿತರರು ಭೇಟಿ ನೀಡಿದ್ದಾರೆ. ಧರ್ಮೇಗೌಡ ಅವರ ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನು ತಿಳಿದು ಬಂದಿಲ್ಲ. ಆದರೆ ಅವರು ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ಎಳೆದಾಟ ತಳ್ಳಾಟ ಪ್ರಕರಣದಿಂದ ಸಾಕಷ್ಟು ಮನನೊಂದಿದ್ದರು. ಈ ಘಟನೆಯಿಂದ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.


from India & World News in Kannada | VK Polls https://ift.tt/3hrwrF6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...