ರಾಮತ್ನಾಳದಲ್ಲಿ ಎರಡನೇ ಹಂತದ ಮತದಾನ, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜೆಡಿಎಸ್ ಆರೋಪ!

ರಾಯಚೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತದಾರರನ್ನು ಒತ್ತಾಯಪೂರ್ವಕವಾಗಿ ಕರೆತಂದು ಮತ ಹಾಕಿಸುತ್ತಿದ್ದಾರೆ ಎಂದು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಮತದಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಿಂಧನೂರು ತಾಲೂಕಿನ ರಾಮತ್ನಾಳದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತದಾರರನ್ನು ಒತ್ತಾಯದಿಂದ ಕರೆತಂದು ಮತ ಹಾಕಿಸುತ್ತಿದ್ದಾರೆ ಎಂದು ಜೆಡಿಎಸ್ ಬೆಂಬಲತ ಅಭ್ಯರ್ಥಿಗಳು ಆರೋಪಿಸಿದ್ದಾರೆ. ಗ್ರಾಮದಲ್ಲಿ ಮತದಾನಕ್ಕೆ ವಿರೋಧಿಸಿದ ಅಭ್ಯರ್ಥಿಗಳು, ಮತದಾರರ ಮೇಲೆ ಒತ್ತಡ ಹೇರುತ್ತಿರುವುದಕ್ಕೆ ಅಸಮಾಧಾನ ತೋರಿದ್ದಾರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮತದಾರರಿಗೆ ಚೀಟಿಗಳನ್ನು ನೀಡಿ ಮತದಾನದ ಕೇಂದ್ರದವರೆಗೂ ತೆರಳಿ ಮತ ಹಾಕುವಂತೆ ಒತ್ತಡ ಹೇರುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಹೇಳಿದ್ದಾರೆ. ಈ ಕುರಿತಂತೆ ಮತಗಟ್ಟೆ ಬಳಿ ವಾಗ್ವಾದ ನಡೆದಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗಿದೆ.


from India & World News in Kannada | VK Polls https://ift.tt/38FncNd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...