ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಾಜಪೇಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಶುಕ್ರವಾರ ಕಾವೇರಿ ನಿವಾಸದಲ್ಲಿ ಕಾವೇರಿಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಕೂಡಾ ಉಪಸ್ಥಿತರಿದ್ದರು. ಇನ್ನು ಈ ದಿನದ ಅಂಗವಾಗಿ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ನಡೆಯಲಿರುವ ಕೃಷಿ ಸಮ್ಮಾನ್ ಯೋಜನೆ ದಿನಾಚರಣೆಯಲ್ಲೂ ಸಿಎಂ ಬಿಎಸ್‌ವೈ ಭಾಗಿಯಾಗಲಿದ್ದಾರೆ. ದೇಶಾದ್ಯಂತ ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ ಹಾಗೂ ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 96ನೇ ಜನ್ಮದಿನ ಆಚರಣೆ ಮಾಡಲಾಗುತ್ತಿದೆ. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ದೇವಸ್ಥಾನ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಇನ್ನು ವೈಕುಂಠ ಏಕದಾಶಿ ಪ್ರಯುಕ್ತ ಮುಖ್ಯಮಂತ್ರಿ ಬಿಎಸ್‌ವೈ ಶುಕ್ರವಾರದಂದು ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಶ್ರೀ ಶ್ರೀನಿವಾಸ ದೇವಸ್ಥಾನ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು
from India & World News in Kannada | VK Polls https://ift.tt/3mO0ojt