ನಿಂಬಾಳ್ಕರ್ ವಿರುದ್ಧ ಶಿಸ್ತುಕ್ರಮ ಏಕಿಲ್ಲ? ವರ್ಗಾವಣೆ ಆದೇಶದ ಬೆನ್ನಲ್ಲೇ ಡಿ. ರೂಪಾ ಪ್ರಶ್ನೆ

ಬೆಂಗಳೂರು: ಸುರಕ್ಷಾ ನಗರ ಟೆಂಡರ್‌ ವಿಚಾರವಾಗಿ ಐಪಿಎಸ್ ಅಧಿಕಾರಿಗಳಾದ ಹೇಮಂತ್‌ ನಿಂಬಾಳ್ಕರ್‌ ಹಾಗೂ ಡಿ. ರೂಪಾ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದ ಬೆನ್ನಲ್ಲೇ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಈ ಆದೇಶದ ಬೆನ್ನಲ್ಲೇ ನಿಂಬಾಳ್ಕರ್ ವಿರುದ್ಧ ಶಿಸ್ತುಕ್ರಮ ಏಕಿಲ್ಲ ಎಂದು ಡಿ. ರೂಪಾ ಪ್ರಶ್ನಿಸಿದ್ದಾರೆ. ಈ ಕುರಿತಾಗಿ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿರುವ ಅವರು, ನನ್ನ ವರ್ಗಾವಣೆ ಬಂದಿದೆ,ಕರಕುಶಲ ನಿಗಮದ ಎಂಡಿ ಎಂದು.ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್(1 ವರ್ಷ ಹಿಂದೆ) ಶಿಫಾರಸು ಮಾಡಿದ್ದರೂ,ಇನ್ನೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ.ಈ ವರ್ಗಾವಣೆ ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿರ್ಭಯಾ ನಿಧಿ ಬಳಸಿ ಬೆಂಗಳೂರು ಮಹಾನಗರವನ್ನು 'ಸೇಫ್‌ ಸಿಟಿ'ಯಾಗಿ ರೂಪಿಸುವ ಯೋಜನೆ ಅಡಿಯಲ್ಲಿ ನಗರಾದ್ಯಂತ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ 627 ಕೋಟಿ ರೂ. ವೆಚ್ಚದ ಟೆಂಡರ್‌ ಕರೆಯಲಾಗಿತ್ತು. ಆದರೆ ಇದರಲ್ಲಿ ಅವ್ಯವಹಾರ ನಡೆದಿದೆ ಎಂದು ಗೃಹ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಿ. ರೂಪಾ ಆರೋಪ ಮಾಡಿದ್ದರು. ಆದರೆ ಈ ಆರೋಪವನ್ನು ಟೆಂಡರ್‌ ಆಹ್ವಾನ ಸಮಿತಿ ಅಧ್ಯಕ್ಷ ಹೇಮಂತ್‌ ನಿಂಬಾಳ್ಕರ್‌ ಅಲ್ಲಗಳೆದಿದ್ದರು. ಇಬ್ಬರು ಐಪಿಎಸ್ ಅಧಿಕಾರಿಗಳ ನಡುವಿನ ಈ ತಿಕ್ಕಾಟ ತಾರಕಕ್ಕೇರಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟು ಮಾಡಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿದ್ದ ಐಜಿಪಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಆರೋಪ ಮಾಡಿದ್ದ ಐಪಿಎಸ್‌ ಅಧಿಕಾರಿ ಅವರನ್ನು ಐಜಿಪಿ ಮತ್ತು ಗೃಹ ಇಲಾಖೆ ಕಾರ್ಯದರ್ಶಿ ಹುದ್ದೆಯಿಂದ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹುದ್ದೆಗೆ ವರ್ಗಾಯಿಸಿ ಗುರುವಾರ ಆದೇಶವನ್ನು ಹೊರಡಿಸಿದೆ. ಸರ್ಕಾರದ ಈ ಆದೇಶದ ಬೆನ್ನಲ್ಲೇ ಡಿ. ರೂಪಾ ಹೇಮಂತ್ ನಿಂಬಾಳ್ಕರ್‌ ವಿರುದ್ಧವಾಗಿ ಶಿಸ್ತು ಕ್ರಮ ಏಕಿಲ್ಲ ಎಂದು ಮತ್ತೊಮ್ಮೆ ಪ್ರಶ್ನಿಸಿದ್ದಾರೆ.


from India & World News in Kannada | VK Polls https://ift.tt/2KP5P4I

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...