ಕೊಡಗು: ಚಿಕನ್‌ ಸಾಂಬಾರ್‌ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!

ಶ್ರೀಮಂಗಲ: ಪೊನ್ನಂಪೇಟೆ ತಾಲೂಕು ನಾಲ್ಕೇರಿ ಗ್ರಾಮದ ತೋಟದಲ್ಲಿ ಸೋಮವಾರ ರಾತ್ರಿ ಕಾರ್ಮಿಕರ ನಡುವೆ ಊಟದ ವಿಚಾರವಾಗಿ ನಡೆದ ಗಲಾಟೆ ವೇಳೆ ಹಲ್ಲೆಯಿಂದ ಒಬ್ಬ ಮೃತಪಟ್ಟಿದ್ದಾರೆ. ನಂಜನಗೂಡು ತಾಲೂಕಿನ ಕೊತ್ತನಹಳ್ಳಿಯ ಕುಮಾರ್‌ ದಾಸ (25) ಕೊಲೆಯಾದ ಕಾರ್ಮಿಕ. 17 ವರ್ಷದ ಹುಡುಗ ಕೊಲೆ ಆರೋಪಿಯಾಗಿದ್ದು, ಕುಟ್ಟ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಇಬ್ಬರೂ 25 ದಿನಗಳ ಹಿಂದೆ ಮಹೇಶ್‌ ಅವರ ತೋಟದಲ್ಲಿ ಕೆಲಸಕ್ಕೆ ಸೇರಿಕೊಂಡು ಒಟ್ಟಾಗಿ ವಾಸಿಸುತ್ತಿದ್ದರು. ಸೋಮವಾರ ರಾತ್ರಿ ಊಟ ಮಾಡುವ ಸಂದರ್ಭ ಚಿಕನ್‌ ಸಾಂಬಾರ್‌ ಬಡಿಸುವ ವಿಚಾರದಲ್ಲಿ ಜಗಳ ನಡೆದು ಆರೋಪಿಯು ಬ್ಯಾಟ್‌ ಹಾಗೂ ಸೌದೆಯಿಂದ ಕುಮಾರ್‌ದಾಸ ಅವರ ತಲೆಗೆ ಹೊಡೆದಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


from India & World News in Kannada | VK Polls https://ift.tt/3o0doEe

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...