ಮೂಲಭೂತ ಸೌಲಭ್ಯ ಮರೀಚಿಕೆ: ತಡಗಜೆ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ!

ಬೆಳ್ಳಾರೆ: ಗ್ರಾಪಂ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಚುನಾವಣೆಗೆ ಕೆಲವೇ ದಿನ ಬಾಕಿಯಿರುವಾಗ ಸುಳ್ಯ ತಾಲೂಕಿನ ತಡಗಜೆಯ ಗ್ರಾಮಸ್ಥರು ಈ ಬಾರಿಯ ಗ್ರಾಪಂ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಗ್ರಾಮದಲ್ಲಿ ಹಲವು ಸಮಸ್ಯೆಗಳಿವೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಮನವಿ ನೀಡಿದ್ದು, ಪರಿಹರಿಸುವ ಭರವಸೆ ನೀಡಿದರೂ ಈವರೆಗೂ ಈಡೇರಲಿಲ್ಲ. ಈ ಬಗ್ಗೆ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದು, ಈ ಬಾರಿಯ ಗ್ರಾಪಂ ಚುನಾವಣೆ ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದಾರೆ. ಇಲ್ಲಿನ ರಸ್ತೆ ದುಸ್ಥಿತಿ ಹೇಳತೀರದುತೀರಾ ಕಳಪೆ ಮಟ್ಟದ ರಸ್ತೆ ಇದಾಗಿದ್ದು, ಸಂಬಂಧಪಟ್ಟವರಿಗೆ ಮನವಿ ನೀಡಿ ಹಣ ಮಂಜೂರಾದರೂ ರಸ್ತೆ ದುರಸ್ತಿಯಾಗಿಲ್ಲ. ಈ ರಸ್ತೆಯಲ್ಲಿ ನಿತ್ಯ ನೂರಾರು ಶಾಲಾ-ಕಾಲೇಜು ಮಕ್ಕಳು, ಸಾರ್ವಜನಿಕರು ಸಂಚರಿಸುತ್ತಾರೆ. ಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸಮಸ್ಯೆಯೂ ಈ ಗ್ರಾಮದಲ್ಲಿದೆ. ಗಮನಹರಿಸದ ಪ್ರತಿನಿಧಿಗಳು ಇಲ್ಲಿನ ಸಮಸ್ಯೆಗಳಿಗೆ ಗ್ರಾಪಂ ಸದಸ್ಯನಿಂದ ಹಿಡಿದು ಶಾಸಕರವರೆಗೆ ಯಾರೂ ಸ್ಪಂದಿಸಿಲ್ಲ. ಚುನಾವಣೆ ಬಂದಾಗ ಮತ ಕೇಳಲು ಬರುತ್ತಾರೆ, ಭರವಸೆ ನೀಡುತ್ತಾರೆ. ಆದರೆ ನಂತರ ಇತ್ತ ತಲೆಹಾಕಲ್ಲ ಎನ್ನುತ್ತಾರೆ ನೊಂದ ಗ್ರಾಮಸ್ಥರು. ಪ್ರಸಕ್ತ ಸಾಲಿನ ಗ್ರಾಪಂ ಚುನಾವಣೆಯನ್ನು ಇಲ್ಲಿನ ಗ್ರಾಮಸ್ಥರು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಅದರಂತೆ ಇಲ್ಲಿ ಬ್ಯಾನರ್‌ ಅಳವಡಿಸಲಾಗಿದೆ. ಈ ಬ್ಯಾನರ್‌ನಲ್ಲಿ ಜನಪ್ರತಿನಿಧಿಗಳ ಧೋರಣೆಯಿಂದ ಬೇಸತ್ತು ಈ ಬಾರಿಯ ಚುನಾವಣೆ ಬಹಿಷ್ಕರಿಸುತ್ತಿದ್ದೇವೆ ಎಂದು ಉಲ್ಲೇಖಿಸಿದ್ದಾರೆ. ಬೆಳ್ಳಾರೆ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ, ಬ್ಯಾನರ್‌ ಅಳವಡಿಕೆಗೆ ನಿಮಗೆ ಅನುಮತಿ ಇದೆಯೆ ಎಂದು ಕೇಳಿದರು. ಗ್ರಾಮಸ್ಥರ ಸಮಸ್ಯೆ ಆಲಿಸಿ ಸ್ಥಳದಲ್ಲೇ ಅಧಿಕಾರಿಗಳಿಗೆ ಫೋನ್‌ ಮುಖಾಂತರ ಮಾತನಾಡಿ ಸಮಸ್ಯೆಗೆ ಸ್ಪಂದಿಸಬೇಕೆಂದು ಕೇಳಿಕೊಂಡರು. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಬಂದು ಇಲ್ಲಿನ ಸಮಸ್ಯೆಗಳನ್ನು ಆಲಿಸಲಿ ಎಂದು ಗ್ರಾಮಸ್ಥರು ಆಗ್ರಹಿಸಿದರು. ಸುಮಾರು 25 ವರ್ಷಗಳಿಂದ ತಡಗಜೆಯಲ್ಲಿ ಮೂಲಭೂತ ಸೌಲಭ್ಯಗಳ ಸಮಸ್ಯೆ ಇದೆ. ನಮ್ಮ ಬೇಡಿಕೆಗಳಿಗೆ ಭರವಸೆ ಮಾತ್ರ ಹೊರತು ಕೆಲಸ ಕಾರ್ಯಗಳು ಆಗಿಲ್ಲ. ಹಾಗಾಗಿ ಗ್ರಾಮಸ್ಥರೆಲ್ಲರೂ ಸೇರಿ ಈ ಬಾರಿಯ ಗ್ರಾಪಂ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ತಡಗಜೆ ಗ್ರಾಮಸ್ಥರು ತಿಳಿಸಿದ್ದಾರೆ.


from India & World News in Kannada | VK Polls https://ift.tt/3lAn8TE

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...