ಕೊಡಗು:ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಮೂರು ಸ್ಥಳಗಳಲ್ಲಿ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ ಮಡಿಕೇರಿ ತಾಲ್ಲೂಕಿನ ಮತ ಎಣಿಕೆ ಮಡಿಕೇರಿಯಲ್ಲಿ, ವಿರಾಜಪೇಟೆ ತಾಲೂಕಿನ ಮತ ಎಣಿಕೆ ವಿರಾಜಪೇಟೆಯಲ್ಲಿ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಮತ ಎಣಿಕೆ ಕುಶಾಲನಗರದಲ್ಲಿ ನಡೆಯುತ್ತಿದೆ. ಮತ ಎಣಿಕೆ ಕೇಂದ್ರದ ಮುಖ್ಯದ್ವಾರದಲ್ಲಿ ಜನಜಂಗುಳಿ, ನೂಕುನುಗ್ಗಲು ಉಂಟಾಗಿದ್ದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ವಿರುದ್ದ ಅಭ್ಯರ್ಥಿಗಳು ಹಾಗೂ ಏಜೆಂಟರು ರೊಚ್ಚಿಗೆದ್ದಿದ್ದಾರೆ. ಮುಖ್ಯದ್ವಾರದಲ್ಲಿ ಜನಜಂಗುಳಿ, ನೂಕುನುಗ್ಗಲು ಉಂಟಾಗಿದ್ದು, ಎಣಿಕೆ ಕೇಂದ್ರಕ್ಕೆ ತೆರಳಲು ಅವಕಾಶ ಕಲ್ಪಿಸಿಲ್ಲ ಎಂದು ಆರೋಪಿಸಲಾಗಿದೆ. ಪೊಲೀಸ್ ದಬ್ಬಾಳಿಕೆ, ಜಿಲ್ಲಾಡಳಿತದ ವೈಫಲ್ಯ ಎಂದು ಅಭ್ಯರ್ಥಿಗಳು ಮತ್ತು ಎಜೆಂಟರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರಪೇಟೆ ಗೆ ಹೋಲಿಸಿದಲ್ಲಿ ಕುಶಾಲನಗರದಲ್ಲಿ ಸಂಪೂರ್ಣ ಅವ್ಯವಸ್ಥೆ ಇದೆ ಎನ್ನಲಾಗಿದ್ದು, ಮುಂದಿನ ಚುನಾವಣೆಯಲ್ಲಿ ಸೋಮವಾರಪೇಟೆ, ಕುಶಾಲನಗರಕ್ಕೆ ಪ್ರತ್ಯೇಕ ಕೇಂದ್ರಕ್ಕೆ ಒತ್ತಾಯಿಸಲಾಗಿದೆ. ಮಡಿಕೇರಿಯಲ್ಲಿ ಭದ್ರತಾ ಕೊಠಡಿಯನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಮತ್ತು ಚುನಾವಣಾ ವೀಕ್ಷಕರಾದ ಎ.ದೇವರಾಜು ಅವರ ಸಮ್ಮುಖದಲ್ಲಿ ತೆರೆಯಲಾಯಿತು. ಚುನಾವಣಾ ಮೇಲುಸ್ತುವಾರಿ ನಿಲೇಶ್ ಸಿಂದೆ, ಹೆಚ್ವುವರಿ ಜಿಲ್ಲಾಧಿಕಾರಿ ರೂಪ, ತಹಶೀಲ್ದಾರ್ ಮಹೇಶ್, ಡಿವೈಎಸ್ ಪಿ ದಿನೇಶ್ ಕುಮಾರ್ ಇತರರು ಇದ್ದರು.
from India & World News in Kannada | VK Polls https://ift.tt/37UYlpD