ದೇಶದ ಮೊಟ್ಟ ಮೊದಲ ಚಾಲಕ ರಹಿತ ಮೆಟ್ರೋ ರೈಲು ಉದ್ಘಾಟಿಸಿದ ಪ್ರಧಾನಿ ಮೋದಿ!

ಹೊಸದಿಲ್ಲಿ: ದೇಶದ ಮೊಟ್ಟ ಮೊದಲ ರೈಲನ್ನು ಇಂದು(ಡಿ.28-ಸೋಮವಾರ) ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದಾರೆ. ದೆಹಲಿಯ ಮ್ಯಾಗ್ನೆಟಾ ಲೈನ್‌ನ ಚಾಲಕ ರಹಿತ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಿಸಿದ ಪ್ರಧಾನಿ ಮೋದಿ, ಈ ಮೂಲಕ ದೇಶದ ಮೊಟ್ಟ ಮೊದಲ ಚಾಲಕ ರಹಿತ ಮೆಟ್ರೋ ರೈಲಿನ ಸಂಚಾರವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ತಂತ್ರಜ್ಞಾನ ಬೆಳೆದಂತೆಲ್ಲಾ ಮಾನವವನ ಸಂಚಾರ ಸಾಧನಗಳು ಅಭಿವೃದ್ಧಿ ಹೊಂದುತ್ತಲೇ ಇರುತ್ತವೆ. ಇದಕ್ಕೆ ಇಂದು(ಡಿ.28-ಸೋಮವಾರ) ಚಾಲನೆ ನೀಡಲಾಗಿರುವ ಚಾಲಕ ರಹಿತ ಮೆಟ್ರೋ ರೈಲು ಉತ್ತಮ ಉದಾಹರಣೆ ಎಂದು ಹೇಳಿದರು. ದೇಶದ ಮಹಾನಗರಗಳು ಹಾಗೂ ಪ್ರಮುಖ ನಗರಗಳಲ್ಲಿ ಮೆಟ್ರೋ ರೈಲಿನ ಸಂಚಾರವನ್ನು ಕಂಡಿರುವ ನಾವು, ಇನ್ನು ಮುಂದೆ ಚಾಲಕ ರಹಿತ ಮೆಟ್ರೋ ರೈಲನ್ನು ನೋಡಲಿರುವುದು ಸಂತಸದ ಸಂಗತಿ ಎಂದು ಪ್ರಧಾನಿ ಮೋದಿ ಹೇಳಿದರು. ಮೂರು ವರ್ಷಗಳ ಹಿಂದೆ ಈ ಯೋಜನೆಗೆ ಚಾಲನೆ ನೀಡಿದ್ದ ಸೌಭಾಗ್ಯ ನನ್ನದಾಗಿತ್ತು. ಇಂದು ಈ ಯೋಜನೆಯನ್ನು ಉದ್ಘಾಟಿಸುವ ಸೌಭಾಗ್ಯವೂ ನನ್ನ ಪಾಲಿಗೆ ಬಂದಿರುವುದು ನಿಜಕ್ಕೂ ಸಂತಸದ ಸಂಗತಿ ಎಂದು ಪ್ರಧಾನಿ ಮೋದಿ ಈ ವೇಳೆ ನುಡಿದರು. 2004ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ದೇಶದಲ್ಲಿ ಮೊಟ್ಟ ಮೊದಲ ಮೆಟ್ರೋ ರೈಲು ಸೇವೆಗೆ ಚಾಲನೆ ನೀಡಲಾಯಿತು. ಸದ್ಯ ದೇಶದಲ್ಲಿ ಐದು ಮಹಾನಗರಗಳಲ್ಲಿ ಮೆಟ್ರೋ ಸೇವೆ ಇದ್ದು, 18 ನಗರಗಳಲ್ಲಿ ಮೆಟ್ರೋ ಸಂಚಾರ ಸೇವೆ ಇದೆ. 2025ರ ವೇಳೆಗೆ ಈಸೇವೆಯನ್ನು 25 ನಗರಗಳಿಗೆ ವಿಸ್ತರಿಸುವ ಯೋಜನೆ ನಮ್ಮ ಸರ್ಕಾರದ್ದಾಗಿದೆ ಎಂದು ಪ್ರಧಾನಿ ಮೋದಿ ಈ ವೇಳೆ ಹೇಳಿದರು. ಇದೇ ವೇಳೆ ನ್ಯಾಶನಲ್ ಕಾಮನ್ ಮೊಬಿಲಿಟಿ ಕಾರ್ಡ್‌ಗೂ ಚಾಲನೆ ನೀಡಿದ ಪ್ರಧಾನಿ ಮೋದಿ, ರಾಷ್ಟ್ರ ರಾಜಧಾನಿ ದೆಹಲಿಯ ಸಾರ್ವಜನಿಕರ ಪ್ರಯಾಣವನ್ನು ಮತ್ತಷ್ಟು ಸುಗಮಗೊಳಿಸಿದರು. ನವದೆಹಲಿಯಿಂದ ದ್ವಾರಕಾ ಸೆಕ್ಟರ್ 21 ರವರೆಗೆ ಸಾಗುವ 23 ಕಿ.ಮೀ. ದೂರದ ದೆಹಲಿ ವಿಮಾನ ನಿಲ್ದಾಣ ಎಕ್ಸ್‌ಪ್ರೆಸ್ ಮಾರ್ಗಕ್ಕೆ, ನ್ಯಾಶನಲ್ ಕಾಮನ್ ಮೊಬಿಲಿಟಿ ಕಾರ್ಡ್ ಅನ್ವಯವಾಗಲಿದೆ.


from India & World News in Kannada | VK Polls https://ift.tt/3ptV4DC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...