‘ಕೊರೊನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’; ಸಚಿವ ಸುಧಾಕರ್‌ ಮನವಿ

ಬೆಂಗಳೂರು: ಇಂದಿನಿಂದ ಕರ್ನಾಟಕ ರಾಜ್ಯದ ಮಕ್ಕಳು ಮತ್ತೆ ಶಾಲೆ ಕಡೆ ಮುಖ ಮಾಡ್ತಿದ್ದಾರೆ. ಹೊಸ ವರ್ಷಕ್ಕೆ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭಗೊಂಡಿವೆ. ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಕಿವಿ ಮಾತು ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಸುಧಾಕರ್, ‘ಇಂದಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ. 8 ತಿಂಗಳ ನಂತರ ಶಾಲೆ ಕಾಲೇಜುಗಳಿಗೆ ಮರಳುತ್ತಿರುವ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ ನನ್ನ ಕಿವಿಮಾತು ಎಂದು ಹೇಳಿದ್ದಾರೆ. ಸರಣಿ ಟ್ವೀಟ್‌ ಮಾಡಿರುವ ಅವರು, ‘SSLC ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಆತಂಕ ಇದ್ದದ್ದು ಸಹಜ. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಬದ್ಧತೆ ನಿರೂಪಿಸಿತ್ತು. ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. 'ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ' ಎಂಬುದೇ ಸರ್ಕಾರದ ಧ್ಯೇಯ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಪೋಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೋಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೊರೊನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಮನವಿ ಮಾಡಿದ್ದಾರೆ.


from India & World News in Kannada | VK Polls https://ift.tt/3n2gplV

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...