ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಸ್ತಾಪ ಬಿಜೆಪಿ ಮುಂದಿಲ್ಲ; ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಜತೆ ಹೊಂದಾಣಿಕೆ ಮಾಡಿಕೊಳ್ಳುವ ಮತ್ತು ವಿಲೀನ ಮಾಡಿಕೊಳ್ಳುವ ಪ್ರಸ್ತಾಪ ಮುಂದಿಲ್ಲ. ವಿಷಯಾಧಾರಿತ ಹೊಂದಾಣಿಕೆಯೇ ಬೇರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸಂಖ್ಯಾಬಲ ಇಲ್ಲ. ಹಾಗಾಗಿ ಅಲ್ಲಿ ವಿಷಯಾಧಾರಿತ ಹೊಂದಾಣಿಕೆ ಬೇರೆ ಪ್ರಶ್ನೆ. ಅದನ್ನು ಬಿಟ್ಟರೆ ಜೆಡಿಎಸ್‌ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಬಿಜೆಪಿಗೆ ಇಲ್ಲ. ಸ್ವಂತ ಬಲದ ಮೇಲೆ ದೇಶಾದ್ಯಂತ ಪಕ್ಷವನ್ನು ಸಂಘಟಿಸಿದ್ದೇವೆ ಎಂದು ಹೇಳಿದರು. ಇನ್ನು ತೆಲಂಗಾಣ ಉಪಚುನಾವಣೆ, ಹಿಮಾಚಲ ಪ್ರದೇಶ ಸ್ಥಳೀಯ ಚುನಾವಣೆ ಸೇರಿದಂತೆ ಬಹುತೇಕ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತಿದೆ. ಹಾಗಾಗಿ ಜೆಡಿಎಸ್‌ ಜತೆ ವಿಲೀನ ಮಾತುಕತೆಯೇ ಇಲ್ಲ ಎಂದರು. ಇದೇ ವೇಳೆ ಕೊರೊನಾ ವೈರಸ್‌ ರೂಪಾಂತರ ಹಿನ್ನೆಲೆಯಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಪ್ರಸ್ತಾವನೆ ನಮ್ಮ ಬಳಿ ಬಂದಿಲ್ಲ ಎಂದು ಸಚಿವ ಜೋಶಿ ತಿಳಿಸಿದರು.


from India & World News in Kannada | VK Polls https://ift.tt/3psVz0R

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...