ಬೆಳಗಾವಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸೆಕ್ಯೂರಿಟಿ ಗಾರ್ಡ್ ಮಹಿಳೆಯ ಬರ್ಬರ ಹತ್ಯೆ

ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ಬುಧವಾರ ಬೆಳಗ್ಗೆ ಮಾರಕಾಸ್ತ್ರ ಬಳಸಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಡಿ.30ರಂದು ಮುಂಜಾನೆ ನಡೆದಿದೆ. ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಹಡಪದ ಕೊಲೆಯಾದವರು. ತಲ್ವಾರ್ ನಿಂದ ಮಹಿಳೆಯ ಮುಖ ಸೇರಿದಂತೆ ದೇಹದ ಭಾಗಗಳಿಗೆ ಮನಸೋ ಇಚ್ಛೆ ಹಲ್ಲೆ ಮಾಡಿ ಹತ್ಯೆಗೈದ ಆರೋಪದಡಿ ಈರಣ್ಣ ಬಾಬು ಜಗಜಂಪಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಆಸ್ಪತ್ರೆ ಕ್ಯಾಂಟೀನ್ ಬಳಿ ಈ ನಡೆದಿದೆ. ಸುಧಾರಾಣಿ ಹಡಪದ ಜಿಲ್ಲಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರೀತಿ ಹಾಗೂ ಹಣಕಾಸಿನ ವ್ಯವಹಾರದಿಂದ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಮಾರ್ಕೆಟ್ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


from India & World News in Kannada | VK Polls https://ift.tt/3rFIovu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...