ರೈತರಿಗೆ ಆಹಾರ ಸಂಸ್ಕರಣೆ ಮತ್ತು ಮಾರುಕಟ್ಟೆ ತರಬೇತಿ ನೀಡುವ ಚಿಂತನೆ ಇದೆ: ಸಚಿವ ಬಿ.ಸಿ. ಪಾಟೀಲ್

ಹಾವೇರಿ: ರಾಜ್ಯ ಸರಕಾರದ ವತಿಯಿಂದ ಮೈಸೂರಿನ ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ)ಯಲ್ಲಿ ಜ.11ರಿಂದ ವಾರಕ್ಕೆ 16 ರೈತರಂತೆ 500 ಜನರಿಗೆ ಆಹಾರ ಸಂಸ್ಕರಣೆ ಮತ್ತು ಮಾರುಕಟ್ಟೆ ತರಬೇತಿ ನೀಡುವ ಚಿಂತನೆ ಇದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ ಹೇಳಿದರು. ಹಿರೇಕೆರೂರು ಪಟ್ಟಣದ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಬುಧವಾರ 'ವಿಜಯ ಕರ್ನಾಟಕ' ವತಿಯಿಂದ ಆಯೋಜಿಸಲಾಗಿದ್ದ 'ಸೂಪರ್‌ ಸ್ಟಾರ್‌ ರೈತ' ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 'ರೈತರ ಮಕ್ಕಳಿಗೆ ಬಿಎಸ್ಸಿ ಅಗ್ರಿ ಮತ್ತು ಅದಕ್ಕೆ ಸಂಬಂಧಿಸಿದ ಕೋರ್ಸ್‌ಗಳಲ್ಲಿ ಶೇ.40 ಮೀಸಲಾತಿ ಇರುವುದನ್ನ ಶೆ. 50ಕ್ಕೆ ಹೆಚ್ಚಿಸುವುದು ಹಾಗೂ ಹಾವು ಕಡಿದು ಮೃತಪಟ್ಟ ರೈತರಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು 5 ಲಕ್ಷಕ್ಕೆ ಏರಿಸುವುದು. ಅಲ್ಲದೇ ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಮಣ್ಣು ಪರೀಕ್ಷಾ ಕೇಂದ್ರವನ್ನು ತೆರೆಯುವ ಉದ್ದೇಶವಿದೆ ಎಂದರು. ಯೋಜನಾಬದ್ಧ ಕೃಷಿ ಹಾಗೂ ವೈವಿಧ್ಯಮಯ ಬೆಳೆಗಳನ್ನು ಬೆಳೆದರೆ ಲಾಭ ಗಳಿಸಬಹುದು. ಇದಕ್ಕೆ ಕೋಲಾರದ ರೈತರೇ ಸಾಕ್ಷಿಯಾಗಿದ್ದಾರೆ. ಅಲ್ಲಿ ನೀರಿನ ಕೊರತೆಯಿದ್ದರೂ ಮಿತವ್ಯಯವಾಗಿ ಬಳಕೆ ಮಾಡಿ ಬಂಪರ್‌ ಬೆಳೆ ಬೆಳೆಯುತ್ತಿದ್ದಾರೆ. ಹೀಗಾಗಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ತುಂಬಾ ವಿರಳ ಎಂದು ಹೇಳಿದರು.


from India & World News in Kannada | VK Polls https://ift.tt/2KSP34B

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...