ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜ. 1ರಿಂದ, 2019-20ನೇ ಸಾಲಿನಲ್ಲಿ ವಿತರಿಸಿದ್ದ ಸ್ಮಾರ್ಟ್‌ಕಾರ್ಡ್ ಪಾಸ್‌ನಲ್ಲೇ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳು ಆರಂಭವಾಗುತ್ತಿವೆ. ಹೀಗಾಗಿ, ವಿದ್ಯಾರ್ಥಿಗಳು ಹಳೆಯ ಬಸ್ ಪಾಸ್, ಶಾಲಾ-ಕಾಲೇಜಿಗೆ ದಾಖಲಾಗಿರುವ ಶುಲ್ಕ ಪಾವತಿ ರಸೀದಿ ಹಾಗೂ ಗುರುತಿನ ಚೀಟಿಯನ್ನು ನಿರ್ವಾಹಕರಿಗೆ ತೋರಿಸಿ ಪ್ರಯಾಣ ಮಾಡಬಹುದಾಗಿದೆ. ಜ. 1ರಿಂದ ಮುಂದಿನ ಆದೇಶದವರೆಗೆ ಸಾಮಾನ್ಯ ಸೇವೆಯ ಬಸ್‌ಗಳಲ್ಲಿ ವಾಸ ಸ್ಥಳದಿಂದ ಶಾಲಾ-ಕಾಲೇಜಿಗೆ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ. ಭಾರತಕ್ಕೆ ಫೆಬ್ರವರಿಯಲ್ಲಿ ಕೊರೊನಾ ಎಂಟ್ರಿ ಕೊಟ್ಟಿದ್ದು ಅದರ ನಂತರ ದೇಶದಲ್ಲಿ ಲಾಕ್‌ಡೌನ್ ಆಗಿತ್ತು. ಆದ್ದರಿಂದ ಶಾಲೆ-ಕಾಲೇಜುಗಳು ರಜೆ ಘೋಷಿಸಿದ್ದವು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಾಲೆ-ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಇದೀಗ ಇಂದಿನಿಂದ ಮತ್ತೆ ಆರಂಭವಾಗಿದೆ.
from India & World News in Kannada | VK Polls https://ift.tt/3o5GS3z