ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ಟ್ರಕ್‌-ಬಸ್‌ ನಡುವೆ ಭೀಕರ ಅಪಘಾತ: 10 ಸಾವು, 25 ಮಂದಿಗೆ ಗಾಯ!

ಹೊಸದಿಲ್ಲಿ: ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ಟ್ರಕ್‌ ಹಾಗೂ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿ ಕನಿಷ್ಠ ಹತ್ತು ಮಂದಿ ಸಾವನಪ್ಪಿರುವ ಘಟನೆ ನಡೆದಿದೆ. ಇನ್ನು ಅಪಘಾತದಲ್ಲಿ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಶನಿವಾರ ಮುಂಜಾನೆ ದಟ್ಟ ಮಂಜಿನಿಂದಾಗಿ ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ಟ್ರಕ್‌ ಹಾಗೂ ಬಸ್‌ ನಡುವೆ ಅಪಘಾತವಾಗಿದೆ. ಓವರ್‌ಟೇಕ್‌ ಮಾಡುವ ಭರದಲ್ಲಿ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್, ಎಸ್ ಪಿ, ಸಿಎಂಒ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ಸದ್ಯ ನಡೆಯುತ್ತಿವೆ. ವಿಧಿವಿಜ್ಞಾನ ತಂಡ ಕೂಡ ಘಟನ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಓವರ್ ಟೇಕ್ ಮಾಡುವ ವೇಳೆಯಲ್ಲಿ ನಡೆದ ಘಟನೆಯ ಪ್ರಕರಣವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ಎಸ್‌ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಮೃತರ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಈ ವಾರದ ಆರಂಭದಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ಮಂಗಳವಾರ ದಟ್ಟ ಮಂಜಿನಿಂದಾಗಿ ಭಡೋಹಿಯ ಗೋಪಿಗಂಜ್ ಪ್ರದೇಶದಲ್ಲಿ ನಿಂತಿದ್ದ ಟ್ರಕ್ ಗೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಐವರು ಮೃತಪಟ್ಟಿದ್ದರು. ಘಟನೆ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದಾರೆ.


from India & World News in Kannada | VK Polls https://ift.tt/39xC2qS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...