11 ಗಂಟೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ ಮಹತ್ವದ ಸುದ್ದಿಗೋಷ್ಠಿ!

ಹೊಸದಿಲ್ಲಿ: ದೇಶದಲ್ಲಿ ಎರಡು ಕೊರೊನಾ ಲಸಿಕೆಗಳಿಗೆ ಕೇಂದ್ರ ತಜ್ಞ ಸಮಿತಿ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಇಂದು(ಜ.03-ಭಾನುವಾರ) 11 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದೆ. ಕೊರೊನಾ ಲಸಿಕೆಗಳ ಕುರಿತು ಕೇಂದ್ರ ತಜ್ಞ ಸಮಿತಿ ನೀಡಿದ ವರದಿಯ ಆಧಾರದ ಮೇಲೆ ಡಿಸಿಜಿಐ ಕೈಗೊಂಡಿರುವ ನಿರ್ಣಯದ ಕುರಿತು, ಇಂದಿನ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಾಗುವುದು ಎಂದು ಹೇಳಲಾಗಿದೆ. ದೇಶದಲ್ಲಿ ಈಗಾಗಲೇ ತಾಲೀಮು ಪ್ರದರ್ಶನ ನಡೆಯುತ್ತಿದದ್ದು, ಈ ಮಧ್ಯೆ ಕೇಂದ್ರ ತಜ್ಞ ಸಮಿತಿ ಎರಡು ಲಸಿಕೆಗಳಿಗೆ ಅನುಮತಿ ನೀಡಿದೆ. ಈ ಲಸಿಕೆಗಳ ಅಂತಿಮ ತೀರ್ಮಾನ ಕೈಗೊಳ್ಳಬೇಕಿರುವ ಡಿಸಿಜಿಐ ಇಂದಿನ ಪತ್ರಿಕಾಗೋಷ್ಠಿಯಲ್ಲಿ ತನ್ನ ನಿರ್ಣಯವನ್ನು ಘೋಷಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ರಚಿಸಿದ ವಿಶೇಷ ತಜ್ಞ ಸಮಿತಿ ಆಕ್ಸ್‌ಫರ್ಡ್‌-ಆಸ್ಟ್ರಾಜೆನಿಕಾ ಕೊರೊನಾ ಲಸಿಕೆಗೆ ಅನುಮತಿ ನೀಡಿದ್ದು, ಇದೀಗ ಕೋವ್ಯಾಕ್ಸಿನ್‌ಗೂ ಗ್ರೀನ್ ಸಿಗ್ನಲ್ ನೀಡಿದೆ. ಆದರೆ ಕೋವ್ಯಾಕ್ಸಿನ್ ಲಸಿಕೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗೆ ಮಾತ್ರ ಶಿಫಾರಸು ಮಾಡುತ್ತಿರುವುದಾಗಿ ಕೇಂದ್ರ ತಜ್ಞ ಸಮಿತಿ ಸ್ಪಷ್ಟಪಡಿಸಿದೆ. ಕೇಂದ್ರ ಸಮಿತಿಯ ಈ ವರದಿಗಳನ್ನು ಆಧರಿಸಿ ಡಿಸಿಜಿಐ ಈಗಾಗಲೇ ನಿರ್ಣಯಗಳನ್ನು ಕೈಗೊಂಡಿದ್ದು, ಅದರ ಘೋಷಣೆಯನ್ನು ಇಂದಿನ ಪತ್ರಿಕಾಗೋಷ್ಠಿಯಲ್ಲಿ ಮಾಡಲಾಗುವುದು ಎಂದು ಹೇಳಲಾಗಿದೆ.


from India & World News in Kannada | VK Polls https://ift.tt/2KUKlUc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...