
ಹೊಸದಿಲ್ಲಿ: 72ನೇ ಗಣರಾಜ್ಯೋತ್ಸವ ಸಮಾರಂಭ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆರಂಭಗೊಂಡಿದ್ದು, ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರು ಈ ವೇಳೆ ಉಪಸ್ಥಿತರಿದ್ದರು. ಗಣರಾಜ್ಯೋತ್ಸವ 2021ರ ಕ್ಷಣಕ್ಷಣದ ಮಾಹಿತಿ ಇಲ್ಲಿದೆ. *ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಣರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆ. *ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ಗೌರವ ಸೂಚಿಸಿದ ಪ್ರಧಾನಿ ಮೋದಿ. *ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಹಾಜರು. *ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥರಿಂದಲೂ ಹುತಾತ್ಮರಿಗೆ ಗೌರವ ಸಲ್ಲಿಕೆ. *ರಾಷ್ಟ್ರೀಯ ಯುದ್ಧ ಸ್ಮಾರಕದಿಂದ ನೇರವಾಗಿ ಕೆಂಪುಕೋಟೆಗೆ ತೆರಳಲಿರುವ ಪ್ರಧಾನಿ ಮೋದಿ. *ರಾಷ್ಟ್ರಪತಿ ಭವನದಿಂದ ರಾಜ್‌ಪಥ್‌ದತ್ತ ಹೊರಟ ರಾಷ್ಟ್ರಪತಿ ರಾಮನಾಥ್ ಕೋವಿಂದ್. * ಸಾಂಪ್ರದಾಯಿಕ ಭದ್ರತೆಯಲ್ಲಿ ರಾಜ್‌ಪಥ್‌ದತ್ತ ಹೊರಟ ರಾಮನಾಥ್ ಕೋವಿಂದ್. *ರಾಜ್‌ಫಥ್‌ಗೆ ಆಗಮಿಸಿದ ಪ್ರಧಾನಿ ಮೋದಿ. *ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಅವರಿಂದ ಧ್ವಜಾರೋಹಣ.
from India & World News in Kannada | VK Polls https://ift.tt/3ccuPOA