ತೊಕ್ಕೊಟ್ಟು: ಪರೀಕ್ಷೆ ನಡೆಸುತ್ತಿದ್ದ ಆಸ್ಪತ್ರೆ ನರ್ಸ್‌ ಜೊತೆ ಅಸಭ್ಯ ವರ್ತಿಸಿದ ಯುವಕನ ಬಂಧನ

ತೊಕ್ಕೊಟ್ಟು: ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಆರೋಗ್ಯ ತಪಾಸಣೆಗೆಂದು ಬಂದಿದ್ದ ವ್ಯಕ್ತಿಯೊಬ್ಬ ನರ್ಸ್‌ ಜತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಬೆಳಗ್ಗೆ ಆರೋಗ್ಯ ತಪಾಸಣೆಗೆಂದು ಬಂದಿದ್ದ ಕೆ.ಸಿ. ರೋಡ್‌ ಕಾಟುಂಗರೆಗುಡ್ಡೆ ನಿವಾಸಿ ಮಹಮ್ಮದ್‌ ಖಲೀಲ್‌ನನ್ನು ವೈದ್ಯರು ಪರೀಕ್ಷಿಸಿದ್ದಾರೆ. ಬಳಿಕ ವೈದ್ಯರ ಸಲಹೆಯಂತೆ ಆಸ್ಪತ್ರೆಯ ನರ್ಸ್‌ ಪರೀಕ್ಷಿಸುತ್ತಿರುವಾಗ ಆರೋಪಿ ನರ್ಸ್‌ ಜೊತೆ ಅಸಭ್ಯವಾಗಿ ವರ್ತಿಸಿ ನೀಡಿದ್ದಾನೆ ಎನ್ನಲಾಗಿದ್ದು, ಪ್ರತಿಭಟಿಸಿದ ನರ್ಸ್‌ ಆರೋಪಿ ವಿರುದ್ಧ ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದಾರೆ. ತಕ್ಷಣ ಧಾವಿಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


from India & World News in Kannada | VK Polls https://ift.tt/2MeArgJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...