ಟ್ರ್ಯಾಕ್ಟರ್‌ ಪರೇಡ್‌ಗೆ ನೀಡಿದ್ದ ಅನುಮತಿಯನ್ನು ರಾತ್ರೋರಾತ್ರಿ ಹಿಂಪಡೆದ ಬೆಳಗಾವಿ ಪೊಲೀಸರು..!

ಬೆಳಗಾವಿ: ರೈತರು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್‌ ಪರೇಡ್‌ಗೆ ಸೋಮವಾರ ಅನುಮತಿ ನೀಡಿದ್ದ ರಾತ್ರೋರಾತ್ರಿ ಅನುಮತಿ ಹಿಂಪಡೆದ ನಡೆದ ಘಟನೆ ನಡೆದಿದೆ. ಸೋಮವಾರ ಬೆಳಗಾವಿ ಪೊಲೀಸರಲ್ಲಿ ಅನುಮತಿ ಕೇಳಿದ್ದ ರೈತ ಮುಖಂಡರು ಗಣರಾಜ್ಯೋತ್ಸವ ದಿನ ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಟ್ರ್ಯಾಕ್ಟರ್‌ ಪರೇಡ್‌ ನಡೆಸಲು ಅನುಮತಿ ನೀಡುವಂತೆ ವಿನಂತಿ ಮಾಡಿಕೊಂಡಿದ್ದರು. ಅದರಂತೆ ಬೆಳಗಾವಿ ಪೊಲೀಸರು ರೈತರ ಮನವಿಗೆ ಸ್ಪಂದಿಸಿ ರೈತರು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್‌ ಪರೇಡ್‌ಗೆ ಅನುಮತಿ ನೀಡಿದ್ದರು. ಆದರೆ ಇದೀಗ ರಾತ್ರೋರಾತ್ರಿ ತಾವು ನೀಡಿದ್ದ ಅನುಮತಿಯನ್ನು ಪೊಲೀಸರು ಹಿಂಪಡೆದಿದ್ದಾರೆ. ರಾಜಕೀಯ ಒತ್ತಡದಿಂದ ಪೊಲೀಸರು ಏಕಾಏಕಿ ಅನುಮತಿ ಹಿಂಪಡೆದಿರುವುದಕ್ಕೆ ಆಕ್ರೋಶಗೊಂಡಿರುವ ರೈತರು ಟ್ರ್ಯಾಕ್ಟರ್‌ ಪರೇಡ್‌ ನಡೆಸಿಯೇ ಸಿದ್ಧ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯ ಬಿಜೆಪಿ ಸರ್ಕಾರದ ನಾಯಕರ ಒತ್ತಡಕ್ಕೊಳಗಾಗಿ ಅನುಮತಿಯನ್ನು ಹಿಂಪಡೆದಿದ್ದಾರೆ ಎಂದು ಕಿಡಿಕಾರಿದ್ದಾರೆ.


from India & World News in Kannada | VK Polls https://ift.tt/2MkEkk2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...