ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಕೈಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡಲಿ; ಎಚ್‌ಡಿಕೆ

ಬೆಂಗಳೂರು: ಕೃಷಿ ಕಾಯ್ದೆಗಳ ವಿಚಾರವಾಗಿ ಹಠಮಾರಿ ಧೋರಣೆ ಕೈಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನು ತೋರಬೇಕು ಎಂದು ಮಾಜಿ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಕೃಷಿ ಕಾಯ್ದೆಗಳನ್ನು ಪುನರ್ ಪರಿಶೀಲನೆ ನಡೆಸಬೇಕು. ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಕೈಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನು ತೋರಬೇಕು ಎಂದು ಹೇಳಿದ್ದಾರೆ. ಅಲ್ಲದೇ ರೈತರ ಸಮಸ್ಯೆಗಳ ಪರಿಹಾರಕ್ಕೆ ನಡೆಯುವ ಹೋರಾಟಕ್ಕೆ ಜೆಡಿಎಸ್ ಸದಾ ಬೆಂಬಲ ನೀಡುತ್ತಿದೆ ಎಂದಿರುವ ಕುಮಾರಸ್ವಾಮಿ, ರೈತರ ಅಭ್ಯುದಯಕ್ಕಾಗಿ ದುಡಿದ ಮತ್ತು ದುಡಿಯುವ ಏಕೈಕ ಪಕ್ಷವೆಂದರೆ ಅದು ಜೆಡಿಎಸ್ ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೇ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುವುದು ಎಲ್ಲರ ಹಕ್ಕು. ರಾಜ್ಯದಲ್ಲಿ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾದರೆ ಅದಕ್ಕೆ ತಕ್ಕ ಪಾಠ ಕಲಿಯಬೇಕಾಗುತ್ತದೆ. ರೈತರ ಶಾಂತಿಯುತ ಪ್ರತಿಭಟನೆಗೆ ರಾಜ್ಯ ಸರ್ಕಾರ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ರೈತ ಕ್ರಾಂತಿಯ ಹೋರಾಟದ ಕಿಚ್ಚಿಗೆ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಅದಕ್ಕೆ ರೈತರು ಬಲಿಯಾಗಬಾರದು ಎಂಬುದು ನನ್ನ ಕಿವಿಮಾತು ಎಂದಿರುವ ಎಚ್‌ಡಿಕೆ, ಸಂಕಷ್ಟಕ್ಕೆ ಸಿಲುಕಿದ ರೈತರ ಕ್ರಾಂತಿಯ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ. ರೈತ ಕ್ರಾಂತಿಯನ್ನು ಹಾದಿ ತಪ್ಪಿಸುವ ಹುನ್ನಾರಗಳಿಗೆ ಮಣಿಯದಿದ್ದರೆ ನೈಜ ಕಳಕಳಿಯ ಹೋರಾಟ ತಾರ್ಕಿಕ ಅಂತ್ಯ ಕಂಡು ಗೆಲುವು ಆಗುತ್ತದೆ ಎಂಬುದು ಪ್ರಾಮಾಣಿಕ ಅನಿಸಿಕೆ ಎಂದಿದ್ದಾರೆ.


from India & World News in Kannada | VK Polls https://ift.tt/39i6cOL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...