ಸುರತ್ಕಲ್‌: ಟೋಲ್ ಕೇಳಿದ್ದಕ್ಕೆ ಸಿಬ್ಬಂದಿಗಳಿಗೆ ಹಿಗ್ಗಾಮುಗ್ಗಾ ಥಳಿಸಿ ಎಸ್ಕೇಪ್‌ ಆದ ದುಷ್ಕರ್ಮಿಗಳು!

ಮಂಗಳೂರು: ಕಾರಿನ ಚಾಲಕನ ಬಳಿ ಟೋಲ್ ಕೇಳಿದ್ದಕ್ಕೆ ಕಾರಿನಲ್ಲಿದ್ದ 7 ಮಂದಿ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಸುರತ್ಕಲ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ರಾತ್ರಿ 10.30ರ ಸುಮಾರಿಗೆ ಕೆ.ಎ. 47 ನೋಂದಣಿಯ ಸ್ವಿಫ್ಟ್ ಕಾರು ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿದ್ದು, ಈ ವೇಳೆ ಟೋಲ್ ಸಿಬ್ಬಂದಿ ಕಾರಿನ ಚಾಲಕನಲ್ಲಿ ಟೋಲ್ ಕೇಳಿದ್ದಾನೆ. ಈ ಸಂದರ್ಭ ವಾಗ್ವಾದ ಆಗಿದ್ದು, ಕಾರಿನಿಂದ ಇಳಿದ ಸುಮಾರು 7 ಮಂದಿ ಸಿಬ್ಬಂದಿ ಜತೆ ಜಗಳವಾಡಿ, ಗಂಭೀರ ಹಲ್ಲೆ ನಡೆಸಿದ್ದಾರೆ. ಇದರಿಂದ ಸಿಬ್ಬಂದಿ ಕೈಗೆ ಗಾಯವಾಗಿದೆ. ಅಷ್ಟೇ ಅಲ್ಲದೆ ಆರೋಪಿಗಳು ಟೋಲ್ ಕೇಂದ್ರದ ಒಳಗೆ ನುಗ್ಗಿ ದಾಂಧಲೆ ನಡೆಸಿದ್ದಾರೆಂದು ತಿಳಿದು ಬಂದಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸುವ ಮೊದಲೇ ಆರೋಪಿಗಳು ಕಾರು ಸಮೇತ ಪರಾರಿಯಾಗಿದ್ದಾರೆ. ಸಿಸಿಯಲ್ಲಿ ದೃಶ್ಯ! ಟೋಲ್ ಗೇಟ್ ನಲ್ಲಿ ಅಳವಡಿಸಿದ ಸಿಸಿ ಕ್ಯಾಮರಾದಲ್ಲಿ ಸಿಬ್ಬಂದಿಗೆ ಹಲ್ಲೆ, ದಾಂಧಲೆ ನಡೆಸಿದ ದೃಶ್ಯ ಸೆರೆಯಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಕಾರಣದಿಂದ ನಾನಾಕಡೆ ನಾಕಾಬಂಧಿ ಹಾಕಿ ತಪಾಸಣೆ ನಡೆಸಲಾಗುತ್ತಿದೆ. ಕಾರು ಹೊನ್ನಾವರದೆಂದು ತಿಳಿದು ಬಂದಿದೆ.


from India & World News in Kannada | VK Polls https://ift.tt/38WqgoD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...