ಮಹಾತ್ಮ ಗಾಂಧಿ ಪುಣ್ಯತಿಥಿ: ಎರಡು ನಿಮಿಷ ಮೌನಾಚರಣೆ ಮೂಲಕ ಗೌರವ ಸಲ್ಲಿಸಿದ ಬಿಎಸ್‌ವೈ

ಬೆಂಗಳೂರು: ಅವರ 73 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ವಿಧಾನಸೌಧದ ಗಾಂಧೀ ಪ್ರತಿಮೆಯ ಮುಂಭಾಗದಲ್ಲಿ ಸಿಎಂ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಜನವರಿ 30 ಈ ದಿನವನ್ನು ದೇಶಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗಾಂಧೀಜಿ ಹಾಗೂ ದೇಶಕ್ಕಾಗಿ ಹೋರಾಟ ಮಾಡಿ ಹುತಾತ್ಮರಾದವರಿಗೆ ಈ ದಿನದಂದು ಗೌರವ ಸಲ್ಲಿಸಲಾಗುತ್ತದೆ. ಈ ನಿಟ್ಟಿನಲ್ಲಿ ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿಎರಡು ನಿಮಿಷಗಳ ಕಾಲ ಬಿಎಸ್‌ವೈ ಹಾಗೂ ಇತರ ಸಚಿವರು ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿದರು ಹಾಗೂ ಗಾಂಧೀ ಭಾವಾಚಿತ್ರಕ್ಕೆ ಮಾಲಾರ್ಪಣೆಮಾಡುವ ಮೂಲಕ ಗೌರವ ಸಮರ್ಪಿಸಿದರು. ಬಳಿಕ ಮಾತನಾಡಿದ ಅವರು, ಮಹಾತ್ಮ ಗಾಂಧಿ ದೇಶವನ್ನು ಬ್ರಿಟಿಷ್ ದಾಸ್ಯದಿಂದ ಮುಕ್ತಗೊಳಿಸುವುದರ ಜೊತೆಗೆ ಅಸ್ಪೃಶ್ಯತೆ ವಿರುದ್ದ ಹೋರಾಟ ಮಾಡಿದರು. ಅವರ ತತ್ವ- ಸಿದ್ದಾಂತ ಪಾಲನೆ ಮಾಡುವುದೇ ನಿಜವಾಗಿ ಅವರಿಗೆ ಸಲ್ಲಿಸುವ ಗೌರವ ಎಂದರು. ಕಾರ್ಯಕ್ರಮದಲ್ಲಿ ಸಚಿವ ಆರ್‌. ಅಶೋಕ್ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಕೆಪಿಸಿಸಿ ಕಚೇರಿಯಲ್ಲೂ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.


from India & World News in Kannada | VK Polls https://ift.tt/3oyqOXx

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...