ಉಡುಪಿ: ಮೀನು ಸಾಗಾಟದ ವಾಹನ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು

ಉಡುಪಿ: ಮಲ್ಪೆ ಬಂದರಿನಿಂದ ಮೀನು ಸಾಗಾಟ ಮಾಡುತ್ತಿದ್ದ ಲಾರಿವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ಮೃತರನ್ನು ಇಸಾಕ್ ಹೂಡೆ ಎಂದು ಗುರುತಿಸಲಾಗಿದೆ. ಮೀನು ಸಾಗಾಟದ ಇನ್ಸುಲೇಟರ್ ವಾಹನ ಬೆಳಗ್ಗಿನ ಜಾವ 4.30 ರ ಸುಮಾರಿಗೆ ಮಲ್ಪೆ ತೊಟ್ಟಂ ಸಮೀಪ ಹೂಡೆಯಿಂದ ಮಲ್ಪೆ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


from India & World News in Kannada | VK Polls https://ift.tt/2JHXBuU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...