'ಮುಂಬಯಿ ಎಂದೆಂದಿಗೂ ನಮ್ಮದು'; ಸವದಿ ಹೇಳಿಕೆಗೆ ಅಜಿತ್‌ ಪವಾರ್‌ ಗುಡುಗು

ಮುಂಬಯಿ: ಮುಂಬಯಿ ನಗರ ಮಹಾರಾಷ್ಟ್ರಕ್ಕೆ ಸೇರಿದ್ದು. ಅದು ನಮ್ಮ ರಾಜ್ಯದ ಅವಿಭಾಜ್ಯ ಅಂಗ. ಇದು ಎಲ್ಲರಿಗೂ ಗೊತ್ತಿರುವ ವಿಷಯ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಗುರುವಾರ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅಜಿತ್‌ ಪವಾರ್‌, ಮರಾಠಿ ಭಾಷಿಗರಿರುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕೆಂದು ನಮ್ಮ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಒತ್ತಾಯಿಸಿದ್ದರು. ಹೀಗಾಗಿ ಕರ್ನಾಟಕದ ಜನರನ್ನು ಸಮಾಧಾನಪಡಿಸಲು ಸವದಿ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದರು. ಮುಂಬಯಿ ನಿನ್ನೆಯೂ ನಮ್ಮದಾಗಿತ್ತು. ಇಂದೂ ನಮ್ಮದೇ. ಮುಂದೆಯೂ ನಮ್ಮದಾಗಿರಲಿದೆ. ಇದನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಸವದಿ ಹೇಳಿಕೆಗೆ ಹೆಚ್ಚಿನ ಮಹತ್ವ ನೀಡಬೇಕಾಗಿಲ್ಲ. ಅವರ ಬೇಡಿಕೆಗೆ ಅರ್ಥವೇ ಇಲ್ಲ ಎಂದು ಪವಾರ್‌ ಕುಟುಕಿದ್ದಾರೆ.


from India & World News in Kannada | VK Polls https://ift.tt/39sp0el

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...