ಗ್ರಾಮಗಳ ಅಭಿವೃದ್ಧಿ ಅಧ್ಯಯನ ನಡೆಸಲು ಕೇರಳ, ಅಂಧ್ರಕ್ಕೆ ನಿಯೋಗ ಕಳುಹಿಸ್ತೀವಿ: ಕೆಎಸ್‌ ಈಶ್ವರಪ್ಪ

ಬೆಂಗಳೂರು: ಕೇರಳ ಮತ್ತು ಆಂಧ್ರಪ್ರದೇಶ ರಾಜ್ಯಗಳು ಅಭಿವೃದ್ಧಿಪಡಿಸಿರುವ ಗ್ರಾಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ 25 ಮಂದಿ ವಿಧಾನ ಪರಿಷತ್‌ ಸದಸ್ಯರ ನಿಯೋಗವನ್ನು ಕಳುಹಿಸಿಕೊಡಲಾಗುತ್ತಿದೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಅವರು ವಿಧಾನ ಪರಿಷತ್‌ಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಕೆ.ಹರೀಶ್‌ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿ, ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ 2017-18 ರಿಂದ 2020-21ನೇ ಸಾಲಿನವರೆಗೆ ₹735.43 ಕೋಟಿ ರೂ. ಬಿಡುಗಡೆಯಾಗಿದೆ. ಆ ಮೊತ್ತವು ಸಂಪೂರ್ಣವಾಗಿ ಖರ್ಚಾಗಿದ್ದು, ₹264.57 ಕೋಟಿ ರೂ. ಬಿಡುಗಡೆ ಬಾಕಿ ಇದೆ. ಈ ಯೋಜನೆಯಡಿ ಆಯ್ಕೆಯಾದ 1000 ಗ್ರಾಮಗಳನ್ನು ₹1000 ಕೋಟಿ ರೂ. ಅನುದಾನದಲ್ಲಿ ಮೂರು ವರ್ಷಗಳ ಕಾಲಾವಧಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು. ಅಲ್ಲದೇ 2017-18ರಲ್ಲೇ 991 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಆನಂತರ ಯಾವುದೇ ಗ್ರಾಮಗಳನ್ನು ಆಯ್ಕೆ ಮಾಡಿಲ್ಲ. ಪರಿಷತ್‌ ಸದಸ್ಯರ ಕೋಟಾದಡಿ ಗ್ರಾಮಗಳನ್ನು ಅಭಿವೃದ್ಧಿಪಡಿಸಲು 2018-211ನೇ ಸಾಲಿನ ತನಕವೂ ಯಾವುದೇ ಹಳ್ಳಿಗಳನ್ನು ಆಯ್ಕೆ ಮಾಡಿ ಅನುದಾನ ಹಂಚಿಲ್ಲ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು. ಜೆಡಿಎಸ್‌ನ ಅಪ್ಪಾಜಿಗೌಡ ಸೇರಿದಂತೆ ಹಲವು ಸದಸ್ಯರು, ಪರಿಷತ್‌ ಸದಸ್ಯರ ಕೋಟಾದಡಿ ಗ್ರಾಮಗಳನ್ನು ಅಭಿವೃದ್ಧಿಪಡಿಸಲು ತಲಾ ₹1 ಕೋಟಿ ರೂ. ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.


from India & World News in Kannada | VK Polls https://ift.tt/3ckATVz

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...