ಮಂಗಳೂರು: ಭಾರತದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಬುಧವಾರ ರಾತ್ರಿ ಮಂಗಳೂರಿಗೆ ಆಗಮಿಸಿದ್ದಾರೆ. ಗುರುವಾರ ಬೆಳಗ್ಗೆ ಶೃಂಗೇರಿ ಮಠಕ್ಕೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರಿಗೆ ಆಗಮಿಸಿದ ಅವರು, ರಾತ್ರಿ ನಗರದ ಬಿಜೈ ಕಾಪಿಕಾಡ್ನ ಹೋಟೆಲ್ ಓಶಿಯನ್ ಪರ್ಲ್ನಲ್ಲಿ ವಾಸ್ತವ್ಯ ಮಾಡಿದ್ದಾರೆ. ಬುಧವಾರ ರಾತ್ರಿ 7 ಗಂಟೆಗೆ ದಿಲ್ಲಿಯಿಂದ ಹೊರಟ ವಿಮಾನ ರಾತ್ರಿ 9.30ರ ಸುಮಾರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು. ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಬಿಜೈಗೆ ಆಗಮಿಸಿ ಹೋಟೆಲ್ಗೆ ಬಂದು ವಾಸ್ತವ್ಯ ಮಾಡಿದ್ದಾರೆ. ಗುರುವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಲಿರುವ ಅವರು ಅಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಶುಕ್ರವಾರ ಮರಳಿ ದಿಲ್ಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ. ಬಿಗಿ ಭದ್ರತೆ!ಸಿಜೆಐ ಭೇಟಿ ಹಿನ್ನೆಲೆಯಲ್ಲಿ ಅವರು ವಾಸ್ತವ್ಯ ಮಾಡುವ ಹೋಟೆಲ್ ಸಹಿತ ಮಂಗಳೂರು ನಗರದಾದ್ಯಂತ ಭಾರಿ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಅವರು ಸಂಚರಿಸುವ ರಸ್ತೆ ಮಾರ್ಗವನ್ನು ಸಂಪೂರ್ಣ ಬಂದ್ ಮಾಡಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕರಿಗೆ ಹೋಟೆಲ್ ಪ್ರವೇಶ ನಿರ್ಬಂಧಿಸಲಾಗಿತ್ತು.ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೋಬ್ಡೆ ತಿರುಪತಿ ವೆಂಕಣರಮಣನ ದರ್ಶನ ಮಾಡಿದ್ದರು.
from India & World News in Kannada | VK Polls https://ift.tt/3oMEMpy