
ಬೆಂಗಳೂರು: ಗುರುವಾರದಿಂದ ಆರಂಭವಾಗಲಿದ್ದು ಆಡಳಿತ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಭಾಷಣ ಮಾಡಲಿದ್ದಾರೆ. ಫೆಬ್ರವರಿ 5 ರ ವರೆಗೆ ಅಧಿವೇಶನ ನಡೆಯಲಿದ್ದು ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಸಜ್ಜಾದರೆ ವಿಪಕ್ಷಗಳ ಬಾಣವನ್ನು ಎದುರಿಸಿಲು ಆಡಳಿತ ಪಕ್ಷವೂ ಸಜ್ಜಾಗಿದೆ. ವಿಪಕ್ಷಗಳ ಬತ್ತಲಿಕೆಯಲ್ಲಿವೆ ಹಲವು ಅಸ್ತ್ರ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಸಜ್ಜಾಗಿದೆ. ಆಡಳಿತ ವೈಫಲ್ಯ, ಅನುದಾನ ವಿಳಂಬ, ರೈತರ ಹೋರಾಟ, ಕೃಷಿ ಕಾಯ್ದೆಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಪ್ರಶ್ನಿಸಿದರು ಹಾಗೂ ಸದನದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ. ಹಲವು ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತ ಆಗಿರುವ ಹಿನ್ನೆಲೆಯಲ್ಲಿ ಸದನದಲ್ಲಿ ಪ್ರಸ್ತಾಪಿಸಿ ಆಡಳಿತ ಪಕ್ಷವನ್ನು ಮುಜುಗರಕ್ಕೀಡು ಮಾಡುವುದು ಕಾಂಗ್ರೆಸ್ ಯೋಜನೆ ಆಗಿದೆ. ಈ ನಿಟ್ಟಿನಲ್ಲಿ ಗುರುವಾರ ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಇನ್ನು ಜೆಡಿಎಸ್ ಕೂಡಾ ಸರ್ಕಾರವನ್ನು ಇಟ್ಟಕ್ಕಿಗೆ ಸಿಲುಕಿಸಲು ತಂತ್ರಗಾರಿಗೆ ರೂಪಿಸುತ್ತಿದೆ. ಸ್ವಪಕ್ಷೀಯ ಶಾಸಕರ ಕಾಟ! ಅಧಿವೇಶನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸ್ವಪಕ್ಷೀಯ ಶಾಸಕರ ವಿರೋಧವನ್ನು ಎದುರಿಸಬೇಕಾಗದ ಇಕ್ಕಟ್ಟಿನ ಪರಿಸ್ಥಿತಿಯಲ್ಲಿದ್ದಾರೆ. ಬಿಎಸ್‌ವೈ ವಿರುದ್ಧ ಅಸಮಾಧಾನಗೊಂಡಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗಾಗಲೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಕ್ಷೇತ್ರಕ್ಕೆ ಅನುದಾನ ಸಿಗದೇ ಇರುವ ಬಗ್ಗೆ ಹಾಗೂ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಲಾಗುತ್ತಿದೆ ಎಂಬ ಆರೋಪವನ್ನೂ ಮಾಡಿದ್ದಾರೆ. ಸದನದಲ್ಲಿ ಇವನ್ನೆಲ್ಲಾ ಪ್ರಶ್ನೆ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ಸ್ವಪಕ್ಷೀಯ ಶಾಸಕರ ಪ್ರಶ್ನೆಗಳು ಹಾಗೂ ವಿರೋಧಗಳನ್ನು ಸದನದಲ್ಲಿ ಎದುರಿಸಬೇಕಾದ ಅನಿವಾರ್ಯ ಪರಿಸ್ಥಿತಿಯೂ ಬಿಎಸ್‌ವೈಗಿದೆ.
from India & World News in Kannada | VK Polls https://ift.tt/3qThjDD