ಭಾರತಕ್ಕೆ ಸಿಕ್ತು ಲಸಿಕೆ ಬಲ: ದೇಶದ ಮೊಟ್ಟ ಮೊದಲ ಕೊರೊನಾ ಲಸಿಕೆಗೆ ಡಿಸಿಜಿಐ ಸಮ್ಮತಿ!

ಹೊಸದಿಲ್ಲಿ: ಆಶಾದಾಯಕ ಬೆಳವಣಿಗೆಯೊಂದರಲ್ಲಿ ದೇಶದ ಮೊಟ್ಟ ಮೊದಲ ಲಸಿಕೆಗೆ, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ() ಅನುಮತಿ ನೀಡಿದೆ. ಆಕ್ಸ್‌ಫರ್ಡ್‌-ಆಸ್ಟ್ರಾಜೆನಿಕಾ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್‌ ಲಸಿಕೆಗಳ ಸಾರ್ವತ್ರಿಕ ಬಳಕೆಗೆ ಅನುಮತಿ ನೀಡಿರುವ ಡಿಸಿಜಿಐ, ಶೀಘ್ರದಲ್ಲೇ ಈ ಲಸಿಕೆ ಹಂಚಿಕೆ ಹಾಗೂ ವಿತರಣೆಗೆ ಮುಂದಡಿ ಇಡಲಾಗುವುದು ಎಂದು ಸ್ಪಷ್ಟಪಡಿಸಿದೆ. ಈ ಎರಡೂ ಲಸಿಕೆಗಳನ್ನು ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ ಎಂದೂ ಡಿಸಿಜಿಐ ಸ್ಪಷ್ಟಪಡಿಸಿದೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ ಡಿಸಿಜಿಐ, ಕೇಂದ್ರ ತಜ್ಞ ಸಮಿತಿ ಶಿಫಾರಸುಗಳನ್ನು ಒಪ್ಪಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ. ಕೇಂದ್ರ ತಜ್ಞ ಸಮಿತಿ ಶಿಫಾರಸಿನ ಅನ್ವಯ ನಾವು ಆಕ್ಸ್‌ಫರ್ಡ್‌-ಆಸ್ಟ್ರಾಜೆನಿಕಾ ಹಾಗೂ ಕೋವ್ಯಾಕ್ಸಿನ್‌ ಕೊರೊನಾ ಲಸಿಕೆಗೆ ಅನುಮತಿ ನೀಡಿದ್ದು, ಸರ್ಕಾರ ಈಗಾಗಲೇ ಇವುಗಳ ಹಂಚಿಕೆ ಹಾಗೂ ವಿತರಣೆಗೆ ಕ್ರಮ ಕೈಗೊಂಡಿದೆ ಎಂದು ಡಿಸಿಜಿಐ ಮುಖ್ಯಸ್ಥರು ಹೇಳಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಭಾರತದ ಸುದೀರ್ಘ ಹೋರಾಟ ಮಹತ್ವದ ಘಟ್ಟ ತಲುಪಿದ್ದು, ಕೊರೊನಾ ಲಸಿಕೆ ಸಾರ್ವತ್ರಿಕ ಬಳಕೆ ಒಂದು ಕ್ರಾಂತಿಕಾರಿ ಹೆಜ್ಜೆ ಎಂದು ಡಿಸಿಜಿಐ ಬಣ್ಣಿಸಿದೆ. ಹಲವು ಹಂತಗಳಲ್ಲಿ ಕೊರೊನಾ ಲಸಿಕೆಯನ್ನು ಜನರಿಗೆ ನೀಡಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದ್ದು, ಈ ಹಂತಗಳ ಪರಿಣಾಮಕಾರಿ ಜಾರಿ ಸರ್ಕಾರದ ಜವಾಬ್ದಾರಿ ಎಂದು ಡಿಸಿಜಿಐ ಹೇಳಿದೆ. ಭಾರತದಲ್ಲಿ ಕೊರೊನಾ ವೈರಸ್ ಹಾವಳಿ ಆರಂಭವಾದ ಮೇಲೆ, ಇದೇ ಮೊದಲ ಬಾರಿಗೆ ಲಸಿಕೆಯೊಂದಕ್ಕೆ ಸಾರ್ವತ್ರಿಕ ಬಳಕೆಯ ಅನುಮತಿ ನೀಡಲಾಗಿದೆ. ಹಲವು ಸುತ್ತಿನ ಕಠಿಣ ಪರೀಕ್ಷೆ ಬಳಿಕ ಈ ಲಸಿಕೆಯ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ಡಿಸಿಜಿಐ ಸ್ಪಷ್ಟಪಡಿಸಿದೆ.


from India & World News in Kannada | VK Polls https://ift.tt/3b3P8NW

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...