ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: ದೆಹಲಿ ಪೊಲೀಸರಿಂದ ಶೀಘ್ರದಲ್ಲೇ ಪತ್ರಿಕಾಗೋಷ್ಠಿ!

ಹೊಸದಿಲ್ಲಿ: ಗಣರಾಜ್ಯೋತ್ಸವದ ದಿನ(ಜ.26-ಮಂಗಳವಾರ) ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹಿಂಸಾತ್ಮಕ ರೈತ ಪ್ರತಿಭಟನೆ ಕುರಿತು, ದೆಹಲಿ ಪೊಲೀಸರು ಇಂದು(ಜ.27-ಬುಧವಾರ) ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಟ್ರ್ಯಾಕ್ಟರ್ ಪರೇಡ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣ ಹಾಗೂ ಹಿಂಸಾಚಾರದ ಪರಿಣಾಮಗಳ ಕುರಿತು ದೆಹಲಿ ಪೊಲೀಸರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ. ಟ್ರ್ಯಾಕ್ಟರ್ ಪರೇಡ್‌ ವೇಳೆ ನಡೆದ ಹಿಂಸಾಚಾರದಲ್ಲಿ ಇಲಾಖೆಯ 300ಕ್ಕೂ ಅಧಿಕ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಪೈಕಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿ ಹಿಂಸಾಚಾರವನ್ನು ನಿಭಾಯಿಸಿದ ರೀತಿ ಕುರಿತು ಪ್ರಶ್ನೆಗಳು ಎದ್ದಿದ್ದು, ಇಷ್ಟೊಂದು ಭಾರೀ ಪ್ರಮಾಣದಲ್ಲಿ ಹಿಂಸಾಚಾರ ನಡೆಯುವ ಸಣ್ಣ ಸುಳಿವೂ ಇಲಾಖೆಗೆ ಇರಲಿಲ್ಲವೇಕೆ ಎಂಬ ಅನುಮಾನ ಮೂಡಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಹಾಗೂ ಹಿಂಸಾಚಾರ ಭುಗಿಲೇಳಲು ಅಸಲಿ ಕಾರಣವೇನು ಎಂಬುದರ ಕುರಿತು ದೆಹಲಿ ಪೊಲೀಸ್ ಇಲಾಖೆ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಿದೆ ಎನ್ನಲಾಗಿದೆ. ಸದ್ಯ ಹಿಂಸಾಚಾರ ಸಂಪೂರ್ಣ ತಹಬದಿಗೆ ಬಂದಿದ್ದು, ಪ್ರತಿಭಟನಾನಿರತ ರೈತರು ಮರಳಿ ತಮ್ಮ ಮೂಲ ಸ್ಥಾನ ಸಿಂಘು ಗಡಿಗೆ ಮರಳಿದ್ದಾರೆ. ಅದಾಗ್ಯೂ ಸಿಂಘು ಗಡಿ, ಟಿಕ್ರಿ ಗಡಿ ಹಾಗೂ ದೆಹಲಿಯ ಕೆಂಪುಕೋಟೆ ಬಳಿ ಭಾರೀ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲಾಗಿದೆ ಎಂದು ದೆಹಲಿ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಅಲ್ಲದೇ ಹೆಚ್ಚುವರಿ ಭದ್ರತಾ ಪಡೆಗಳು ದೆಹಲಿಯಲ್ಲಿ ಬೀಡು ಬಿಟ್ಟಿರುವುದು ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ.


from India & World News in Kannada | VK Polls https://ift.tt/3sZrg4h

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...