ಜನರಿಗೆ ಆರ್ಥಿಕ ಬರೆ: ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆ ಹೆಚ್ಚಿಸಿದ ರಾಜ್ಯ ಸರಕಾರ

ಬೆಂಗಳೂರು: ಕೊರೊನಾದಿಂದಾಗಿ ರಾಜ್ಯದ ಜನ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಆಸ್ತಿ ತೆರಿಗೆ ಹೆಚ್ಚಳದ ಮೂಲಕ ರಾಜ್ಯ ಸರಕಾರ ಜನಸಾಮಾನ್ಯರಿಗೆ ಬರೆ ಹಾಕಿದೆ. ಸಿಎಂ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತುಪಡಿಸಿ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ತೀರ್ಮಾನಿಸಿದೆ. ಸಂಪುಟ ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ''ತೆರಿಗೆ ಹೆಚ್ಚಳದಿಂದ ಸ್ಥಳೀಯ ಸಂಸ್ಥೆಗಳಿಗೆ ಆಸ್ತಿ ತೆರಿಗೆ ಆದಾಯ ಹೆಚ್ಚಾಗಲಿದೆ. ಜತೆಗೆ ಸ್ಥಳೀಯ ಸಂಸ್ಥೆಗಳು ಆರ್ಥಿಕವಾಗಿ ಬಲಗೊಳ್ಳಲಿವೆ. 2020-21ನೇ ಸಾಲಿಗೆ ಜಿಎಸ್‌ಡಿಪಿಯ ಶೇ.0.25ರಷ್ಟು ಭಾಗವನ್ನು ಹೆಚ್ಚುವರಿ ಎರವಲಾಗಿ ಕೇಂದ್ರ ಸರಕಾರದಿಂದ ಪಡೆಯಲು ಅನುಕೂಲವಾಗಲಿದೆ,'' ಎಂದು ಸಮರ್ಥಿಸಿಕೊಂಡರು. ವಸತಿ ಹಾಗೂ ವಸತಿಯೇತರ ಕಟ್ಟಡಗಳಿಗೆ ಹಾಲಿ ಶೇ. 0.3ರಿಂದ ಶೇ. 1ರವರೆಗೆ ಆಸ್ತಿ ತೆರಿಗೆ ವಿಧಿಸಲಾಗುತ್ತಿದೆ. ಈ ತೆರಿಗೆಯನ್ನು ಶೇ. 0.2ರಿಂದ ಶೇ. 1.5ಕ್ಕೆ ಹೆಚ್ಚಿಸಲಾಗಿದೆ. ಅದೇ ರೀತಿ ನಿವೇಶನಗಳಿಗೆ 1000 ಚದರ ಮೀಟರ್‌ (3 ಸಾವಿರ ಅಡಿ) ತೆರಿಗೆ ವಿನಾಯಿತಿ ನೀಡಲಾಗಿತ್ತು. ಈಗ ಅದನ್ನು ರದ್ದುಪಡಿಸಿ ನಿವೇಶನಗಳಿಗೆ ಶೇ. 0.2ರಿಂದ ಶೇ. 0.5ರವರೆಗೆ ತೆರಿಗೆ ವಿಧಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಇದುವರೆಗೆ ಕಟ್ಟಡಕ್ಕೆ ಹೊಂದಿಕೊಂಡ ಖಾಲಿ ನಿವೇಶನ ಎಷ್ಟೇ ವಿಸ್ತೀರ್ಣವಿದ್ದರೂ ಅದಕ್ಕೆ ಯಾವುದೇ ತೆರಿಗೆ ವಿಧಿಸುತ್ತಿರಲಿಲ್ಲ. ಇದೀಗ ಕಟ್ಟಡಕ್ಕೆ ಹೊಂದಿಕೊಂಡ ನಿವೇಶನದಲ್ಲಿ 1,000 ಚದರಡಿವರೆಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಆದರೆ, 1000 ಚದರಡಿಗಿಂತ ಹೆಚ್ಚು ವಿಸ್ತೀರ್ಣದ ಖಾಲಿ ಜಾಗಕ್ಕೆ ನಿವೇಶನಕ್ಕೆ ವಿಧಿಸುವ ತೆರಿಗೆ ವಿಧಿಸಲಾಗುತ್ತದೆ.


from India & World News in Kannada | VK Polls https://ift.tt/3qkkcxe

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...