ವಿಜಯಪುರ: ಸಿಂದಗಿ ಕ್ಷೇತ್ರದ ಶಾಸಕ,ಮಾಜಿ ಸಚಿವ ಎಂಸಿ.ಮನಗೂಳಿ ಇನ್ನಿಲ್ಲ..!

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ(85) ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಗೂಳಿ ಅವರನ್ನು ಜನವರಿ 9ರಂದು ಏರ್ ಲಿಪ್ಟ್ ಮುಖಾಂತರ ಕಲಬುರ್ಗಿಯ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ತಡರಾತ್ರಿ 1 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಎರಡು ಬಾರಿ ಸಚಿವರು ಹಾಗೂ ಎರಡು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ ಖ್ಯಾತಿ ಮನಗೂಳಿಯವರಿಗಿದೆ. ಸತತ ಏಳು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮನಗೂಳಿ ಅವರು, ಎರಡು ಬಾರಿ ಸಚಿವರು, ಶಾಸಕರಾಗಿದ್ದರು. 1994ರಲ್ಲಿ‌ ಮೊಟ್ಟ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಮೊದಲ ಬಾರಿಗೆ ಸಚಿವರೂ ಆಗಿದ್ದರು. ಅಂದು ಜೆಎಚ್ ಪಟೇಲ್ ನೇತೃತ್ವದ ಸರ್ಕಾರದಲ್ಲಿ 12 ತಿಂಗಳುಗಳ ಕಾಲ ಪಂಚಾಯತ್ ರಾಜ್ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2018ರಲ್ಲಿ ಎರಡನೆಯ ಬಾರಿಗೆ ಶಾಸಕರಾಗಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವರಾಗಿ 14 ತಿಂಗಳುಗಳ‌ ಕಾಲ ತೋಟಗಾರಿಕಾ‌ ಇಲಾಖೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದರು. ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ , ಪತ್ನಿ ಸಿದ್ದಮ್ಮ ನಾಲ್ವರು ಪುತ್ರರು ಹಾಗೂ ಓರ್ವ‌ ಪುತ್ರಿಯನ್ನು ಅಗಲಿದ್ದು, ಅವರ ಪಾರ್ಥಿವ ಶರೀರವನ್ನು ಆಂಬ್ಯುಲೆನ್ಸ್ ಮೂಲಕ ಸಿಂದಗಿಗೆ ರವಾನಿಸಲಾಗಿದೆ.


from India & World News in Kannada | VK Polls https://ift.tt/3cfr7np

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...