ಬಿಹಾರದಲ್ಲಿ ಮಾಡಿದ ಹಾಗೆ ಬಂಗಾಳದಲ್ಲೂ ಓವೈಸಿ ನಮಗೆ ಸಹಾಯ ಮಾಡಲಿದ್ದಾರೆ: ಬಿಜೆಪಿ ನಾಯಕ ಸಾಕ್ಷಿ ಮಹರಾಜ್‌ ಹೇಳಿಕೆ

ಲಖನೌ: ಬಿಹಾರದಲ್ಲಿ ನಮಗೆ ಸಹಾಯ ಮಾಡಿದಂತೆ ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಎಐಎಂಐಎಂನ ನಮಗೆ ಸಹಾಯ ಮಾಡಲಿದ್ದಾರೆ ಎಂದು ಅವರ ಖಟ್ಟರ್ ವಿರೋಧಿ ಉನ್ನಾವ್‌ ಬಿಜೆಪಿ ಸಂಸದ ಹೇಳಿದ್ದಾರೆ. ಉತ್ತರ ಪ್ರದೇಶ ಪ್ರವಾಸದಲ್ಲಿರುವ ಓವೈಸಿ ಅವರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ದೇವರ ದಯೆ. ದೇವರು ಅವರಿಗೆ ಇನ್ನಷ್ಟು ಶಕ್ತಿ ನೀಡಲಿ. ಅವರು ನಮಗೆ ಬಿಹಾರ ಚುನಾವಣೆಯಲ್ಲಿ ಸಹಾಯ ಮಾಡಿದ್ದರು. ಮುಂದೆ ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ನಮಗೆ ಸಹಾಯ ಮಾಡಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಸಾಕ್ಷಿ ಮಹರಾಜ್‌ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ದಾರಿ ಮಾಡಿ ಕೊಟ್ಟಿದೆ. ಒವೈಸಿಯವರನ್ನು ಬಿಜೆಪಿಯ ಬಿ ಟೀಂ ಎಂದು ನೆಟ್ಟಿಗರು ಟೀಕೆ ಮಾಡಿದ್ದಾರೆ. ಬಿಜೆಪಿಗೆ ಅನುಕೂಲವಾಗಲೆಂದೇ ಬೇರೆ ರಾಜ್ಯಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನ ಕಣಕ್ಕಿಳಿಸುತ್ತಾರೆ. ಮೇಲ್ನೋಟಕ್ಕೆ ಮಾತ್ರ ಅವರು ಬಿಜೆಪಿ ವಿರುದ್ಧ ತೀಕ್ಷ್ಣ ಭಾ‍‍ಷಣ ಮಾಡುತ್ತಾರೆ. ಅಂತರಂಗಲ್ಲಿ ಬಿಜೆಪಿ ಜತೆ ಶಾಮೀಲಾಗಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಳೆದ ವರ್ಷ ನಡೆದ ಬಿಹಾರ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಎಂಐಎಂ ಮುಸ್ಲಿಂ ಬಾಹುಳ್ಯವಿರುವ ಪ್ರದೇಶಗಳಲ್ಲಿ ಐದು ಸೀಟುಗಳನ್ನು ಗೆದ್ದುಕೊಂಡಿತ್ತು. ಬಿಹಾರದಲ್ಲಿ ಆಡಳಿತರೂಢ ನಿತೀಶ್‌ ಕುಮಾರ್‌ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದರೂ, ಓವೈಸಿ ಪಕ್ಷ ಸ್ಪರ್ಧೆಯಿಂದಾಗಿ ಆರ್‌ಜೆಡಿ ನೇತೃತ್ವದ ಮೈತ್ರಿ ಕೂಡ ಸ್ವಲ್ಪದರಲ್ಲೇ ಅಧಿಕಾರ ಕಳೆದುಕೊಂಡಿದೆ ಎನ್ನುವ ಟೀಕೆಗಳು ಕೇಳಿ ಬಂದಿದ್ದವು. ಇನ್ನು ಮೂರು ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದ ಜನಸಂಖ್ಯೆಯಲ್ಲಿ ಶೇ.27ರಷ್ಟು ಮುಸಲ್ಮಾನರಿದ್ದು, ಅಲ್ಲಿಯೂ ಓವೈಸಿ ಅವರ ಪಕ್ಷ ಸ್ಪರ್ಧಿಸಲಿದೆ. ಇದು ಬಿಜೆಪಿಗೆ ವರದಾನವಾಗಲಿದೆ ಎನ್ನುವುದು ರಾಜಕೀಯ ತಜ್ಞರ ವಿಶ್ಲೇಷಣೆ. ಇದೇ ಧಾಟಿಯಲ್ಲಿ ಖಟ್ಟರ್‌ ಹಿಂದುತ್ವವಾದಿಯಾಗಿರುವ ಸಾಕ್ಷಿ ಮಹರಾಜ್‌ ಕೂಡ ಮಾತನಾಡಿದ್ದಾರೆ.


from India & World News in Kannada | VK Polls https://ift.tt/3oJDX0P

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...